< ಕೀರ್ತನೆಗಳು 54 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
Načelniku godbe na strune; pesem Davidova, ukovita. Ko so prišli Zifejci in rekli Savlu: Ali ne tiči David pri nas? Bog, zavoljo imena svojega reši me, in po kreposti svoji potegni se zame.
2 ೨ ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
Bog, čuj molitev mojo, uho nagni besedam mojih ust.
3 ೩ ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. (ಸೆಲಾ)
Ker tujci spenjajo se proti meni in silovitniki iščejo življenje moje; Boga nimajo pred očmi.
4 ೪ ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
Glej, Bog mi pomaga, Gospod je med njimi, ki podpirajo življenje moje.
5 ೫ ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
Sovražnikom mojim vrni tisto zlo, po resničnosti svoji jih pokončaj.
6 ೬ ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
Obilo ti bodem daroval; slavil bodem ime tvoje, Gospod, ker je dobro.
7 ೭ ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.
Ker reši me vsake stiske, in sovražnike moje gleda moje oko.