< ಕೀರ್ತನೆಗಳು 56 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
ऐ ख़ुदा! मुझ पर रहम फ़रमा, क्यूँकि इंसान मुझे निगलना चाहता है; वह दिन भर लड़कर मुझे सताता है।
2 ೨ ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.
मेरे दुश्मन दिन भर मुझे निगलना चाहते हैं, क्यूँकि जो गु़रूर करके मुझ से लड़ते हैं, वह बहुत हैं।
3 ೩ ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
जिस वक़्त मुझे डर लगेगा, मैं तुझ पर भरोसा करूँगा।
4 ೪ ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?
मेरा फ़ख़्र ख़ुदा पर और उसके कलाम पर है। मेरा भरोसा ख़ुदा पर है, मैं डरने का नहीं: बशर मेरा क्या कर सकता है?
5 ೫ ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ.
वह दिन भर मेरी बातों को मरोड़ते रहते हैं; उनके ख़याल सरासर यही हैं, कि मुझ से बदी करें।
6 ೬ ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
वह इकठ्ठे होकर छिप जाते हैं; वह मेरे नक्श — ए — क़दम को देखते भालते हैं, क्यूँकि वह मेरी जान की घात में हैं।
7 ೭ ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.
क्या वह बदकारी करके बच जाएँगे? ऐ ख़ुदा, क़हर में उम्मतों को गिरा दे!
8 ೮ ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
तू मेरी आवारगी का हिसाब रखता है; मेरे आँसुओं को अपने मश्कीज़े में रख ले। क्या वह तेरी किताब में लिखे नहीं हैं?
9 ೯ ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.
तब तो जिस दिन मैं फ़रियाद करूँगा, मेरे दुश्मन पस्पा होंगे। मुझे यह मा'लूम है कि ख़ुदा मेरी तरफ़ है।
10 ೧೦ ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
मेरा फ़ख़्र ख़ुदा पर और उसके कलाम पर है; मेरा फ़ख़्र ख़ुदावन्द पर और उसके कलाम पर है।
11 ೧೧ ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?
मेरा भरोसा ख़ुदा पर है, मैं डरने का नहीं। इंसान मेरा क्या कर सकता है?
12 ೧೨ ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
ऐ ख़ुदा! तेरी मन्नतें मुझ पर हैं; मैं तेरे हुजू़र शुक्रगुज़ारी की कु़र्बानियाँ पेश करूँगा।
13 ೧೩ ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.
क्यूँकि तूने मेरी जान को मौत से छुड़ाया; क्या तूने मेरे पाँव को फिसलने से नहीं बचाया, ताकि मैं ख़ुदा के सामने ज़िन्दों के नूर में चलूँ?