< ಕೀರ್ತನೆಗಳು 57 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
לַמְנַצֵּ֣חַ אַל־תַּ֭שְׁחֵת לְדָוִ֣ד מִכְתָּ֑ם בְּבָרְח֥וֹ מִפְּנֵי־שָׁ֝א֗וּל בַּמְּעָרָֽה׃ חָנֵּ֤נִי אֱלֹהִ֨ים ׀ חָנֵּ֗נִי כִּ֥י בְךָ֮ חָסָ֪יָה נַ֫פְשִׁ֥י וּבְצֵֽל־כְּנָפֶ֥יךָ אֶחְסֶ֑ה עַ֝֗ד יַעֲבֹ֥ר הַוּֽוֹת׃
2 ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
אֶ֭קְרָא לֵֽאלֹהִ֣ים עֶלְי֑וֹן לָ֝אֵ֗ל גֹּמֵ֥ר עָלָֽי׃
3 ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; (ಸೆಲಾ) ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
יִשְׁלַ֤ח מִשָּׁמַ֨יִם ׀ וְֽיוֹשִׁיעֵ֗נִי חֵרֵ֣ף שֹׁאֲפִ֣י סֶ֑לָה יִשְׁלַ֥ח אֱ֝לֹהִ֗ים חַסְדּ֥וֹ וַאֲמִתּֽוֹ׃
4 ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.
נַפְשִׁ֤י ׀ בְּת֥וֹךְ לְבָאִם֮ אֶשְׁכְּבָ֪ה לֹ֫הֲטִ֥ים בְּֽנֵי־אָדָ֗ם שִׁ֭נֵּיהֶם חֲנִ֣ית וְחִצִּ֑ים וּ֝לְשׁוֹנָ֗ם חֶ֣רֶב חַדָּֽה׃
5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
ר֣וּמָה עַל־הַשָּׁמַ֣יִם אֱלֹהִ֑ים עַ֖ל כָּל־הָאָ֣רֶץ כְּבוֹדֶֽךָ׃
6 ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. (ಸೆಲಾ)
רֶ֤שֶׁת ׀ הֵכִ֣ינוּ לִפְעָמַי֮ כָּפַ֪ף נַ֫פְשִׁ֥י כָּר֣וּ לְפָנַ֣י שִׁיחָ֑ה נָפְל֖וּ בְתוֹכָ֣הּ סֶֽלָה׃
7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
נָ֘כ֤וֹן לִבִּ֣י אֱ֭לֹהִים נָכ֣וֹן לִבִּ֑י אָ֝שִׁ֗ירָה וַאֲזַמֵּֽרָה׃
8 ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
ע֤וּרָה כְבוֹדִ֗י ע֭וּרָֽה הַנֵּ֥בֶל וְכִנּ֗וֹר אָעִ֥ירָה שָּֽׁחַר׃
9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
אוֹדְךָ֖ בָעַמִּ֥ים ׀ אֲדֹנָ֑י אֲ֝זַמֶּרְךָ֗ בַּל־אֻמִּֽים׃
10 ೧೦ ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
כִּֽי־גָדֹ֣ל עַד־שָׁמַ֣יִם חַסְדֶּ֑ךָ וְֽעַד־שְׁחָקִ֥ים אֲמִתֶּֽךָ׃
11 ೧೧ ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
ר֣וּמָה עַל־שָׁמַ֣יִם אֱלֹהִ֑ים עַ֖ל כָּל־הָאָ֣רֶץ כְּבוֹדֶֽךָ׃

< ಕೀರ್ತನೆಗಳು 57 >