< ಕೀರ್ತನೆಗಳು 58 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ. ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
Přednímu z kantorů, jako: Nevyhlazuj, Davidův žalm zlatý. Právě-liž vy, ó shromáždění, spravedlnost vypovídáte? Upřímě-liž soudy činíte, vy synové lidští?
2 ೨ ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
Anobrž raději nepravosti v srdci ukládáte, a násilí rukou svých v zemi této odvažujete.
3 ೩ ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
Uchýlili se bezbožníci hned od narození, pobloudili hned od života matky, mluvíce lež.
4 ೪ ಅವರು ಸರ್ಪದಂತೆ ವಿಷಭರಿತರು.
Jed v sobě mají jako jedovatý had, jako lítý had hluchý, kterýž zacpává ucho své,
5 ೫ ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
Aby neslyšel hlasu zaklinačů, a čarodějníka v čářích vycvičeného.
6 ೬ ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
Ó Bože, potři jim zuby v ústech jejich, střenovní zuby lvíčat těch polámej, Hospodine.
7 ೭ ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
Nechť se rozplynou jako voda, a zmizejí; ať jsou jako ten, kterýž napíná luk, jehož však střely se lámí,
8 ೮ ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
Jako hlemejžď, kterýž tratí se a mizí, jako nedochůdče ženy, ješto nespatřilo slunce.
9 ೯ ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
Prvé než lidé pocítí trní jejich a bodláku, hned za živa zapálením jako vichřicí zachváceni budou.
10 ೧೦ ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.
I bude se veseliti spravedlivý, když uzří pomstu, nohy své umyje ve krvi bezbožníka.
11 ೧೧ ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
Ano dí každý: V pravdě, žeť má užitek spravedlivý, jistě, žeť jest Bůh soudce na zemi.