< ಕೀರ್ತನೆಗಳು 59 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ. ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.
To the Chief Musician. "Do not Destroy." A precious Psalm of David. When Saul sent, and they watched the house, to kill him. Rescue me from my foes, O my God, From them who lift themselves up against me, wilt thou set me on high:
2 ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
Rescue me, from the workers of iniquity, And, from the men of bloodshed, save me.
3 ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
For lo! they have lain in wait for my life, Mighty ones stir up strife against me, Without transgression of mine, and without sin of mine, O Yahweh;
4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.
For no iniquity, do they run that they may take their stand, Rouse thyself to meet me, and see.
5 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. (ಸೆಲಾ)
Thou, therefore, O Yahweh, God of hosts, God of Israel, Awake, to visit all the nations, Do not show favour to any iniquitous traitors. (Selah)
6 ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.
They return at evening, They grow like a dog, And go round the city.
7 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.
Lo! they belch forth with their mouth, Swords, are in their lips, For [say they], Who doth hear?
8 ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.
Thou, therefore, O Yahweh, wilt laugh at them, Thou wilt mock at all nations.
9 ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.
O my Strength, unto thee, will I make melody, For, God, is my high tower.
10 ೧೦ ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
My God of lovingkindness, will come to meet me, God, will let me look on mine adversaries.
11 ೧೧ ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
Do not slay them, lest my people forget, Cause them to wander by thy strength, and prostrate them, [Thou] our shield, O Lord!
12 ೧೨ ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
The sin of their mouth, The word of their lips, Let them then be captured in their pride, Both for the oath and for the deception they record.
13 ೧೩ ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. (ಸೆಲಾ)
Bring to a full end in wrath, Bring to a full end, that they be no more, —That men may know that, God, is ruling in Jacob, Unto the ends of the earth. (Selah)
14 ೧೪ ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
Let them return, then, at evening, Let them growl like a dog, And go round the city.
15 ೧೫ ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.
They, may prowl about for food, —And, if they are not satisfied, then let them whine!
16 ೧೬ ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
But, I, will sing thy power, And will shout aloud, in the morning, thy lovingkindness, —For thou has become a refuge for me, And a place to flee to in the day of my distress.
17 ೧೭ ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
O my Strength, unto thee, will I make melody, For, God, is my high tower, my God of lovingkindness.

< ಕೀರ್ತನೆಗಳು 59 >