< ಕೀರ್ತನೆಗಳು 6 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.
لِإِمَامِ ٱلْمُغَنِّينَ عَلَى «ذَوَاتِ ٱلْأَوْتَارِ» عَلَى «ٱلْقَرَارِ». مَزْمُورٌ لِدَاوُدَ يَارَبُّ، لَا تُوَبِّخْنِي بِغَضَبِكَ، وَلَا تُؤَدِّبْنِي بِغَيْظِكَ.١
2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
ٱرْحَمْنِي يَارَبُّ لِأَنِّي ضَعِيفٌ. ٱشْفِنِي يَارَبُّ لِأَنَّ عِظَامِي قَدْ رَجَفَتْ،٢
3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
وَنَفْسِي قَدِ ٱرْتَاعَتْ جِدًّا. وَأَنْتَ يَارَبُّ، فَحَتَّى مَتَى؟٣
4 ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
عُدْ يَارَبُّ. نَجِّ نَفْسِي. خَلِّصْنِي مِنْ أَجْلِ رَحْمَتِكَ.٤
5 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? (Sheol h7585)
لِأَنَّهُ لَيْسَ فِي ٱلْمَوْتِ ذِكْرُكَ. فِي ٱلْهَاوِيَةِ مَنْ يَحْمَدُكَ؟ (Sheol h7585)٥
6 ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
تَعِبْتُ فِي تَنَهُّدِي. أُعَوِّمُ فِي كُلِّ لَيْلَةٍ سَرِيرِي بِدُمُوعِي. أُذَوِّبُ فِرَاشِي.٦
7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
سَاخَتْ مِنَ ٱلْغَمِّ عَيْنِي. شَاخَتْ مِنْ كُلِّ مُضَايِقِيَّ.٧
8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
اُبْعُدُوا عَنِّي يَا جَمِيعَ فَاعِلِي ٱلْإِثْمِ، لِأَنَّ ٱلرَّبَّ قَدْ سَمِعَ صَوْتَ بُكَائِي.٨
9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
سَمِعَ ٱلرَّبُّ تَضَرُّعِي. ٱلرَّبُّ يَقْبَلُ صَلَاتِي.٩
10 ೧೦ ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.
جَمِيعُ أَعْدَائِي يُخْزَوْنَ وَيَرْتَاعُونَ جِدًّا. يَعُودُونَ وَيُخْزَوْنَ بَغْتَةً.١٠

< ಕೀರ್ತನೆಗಳು 6 >