< ಕೀರ್ತನೆಗಳು 6 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.
Æ, Drottinn! Ekki refsa mér í reiði þinni!
2 ೨ ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
Miskunnaðu mér því að ég örmagnast. Lækna mig, því að líkami minn er sjúkur.
3 ೩ ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
Ég er hræddur, veit ekki mitt rjúkandi ráð. Ó, Drottinn, reistu mig á fætur, og það fljótt!
4 ೪ ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
Komdu Drottinn og læknaðu mig. Bjargaðu mér í kærleika þínum.
5 ೫ ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? (Sheol )
Því að ef ég dey, þá get ég ekki lengur lofað þig meðal vina minna. (Sheol )
6 ೬ ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
Ég er aðframkominn af kvöl. Hverja nótt væti ég koddann með tárum.
7 ೭ ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
Augu mín daprast af hryggð vegna illráða óvina minna.
8 ೮ ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
Farið! Látið mig í friði, þið illmenni, því að Drottinn hefur séð tár mín
9 ೯ ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
og heyrt grátbeiðni mína. Hann mun svara öllum mínum bænum.
10 ೧೦ ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.
Óvinir mínir munu verða til skammar og skelfingin mun steypast yfir þá. Guð mun reka þá sneypta burtu.