< ಕೀರ್ತನೆಗಳು 61 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.
大衛的詩,交與伶長。用絲弦的樂器。 上帝啊,求你聽我的呼求, 側耳聽我的禱告!
2 ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
我心裏發昏的時候, 我要從地極求告你。 求你領我到那比我更高的磐石!
3 ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
因為你作過我的避難所, 作過我的堅固臺,脫離仇敵。
4 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. (ಸೆಲಾ)
我要永遠住在你的帳幕裏! 我要投靠在你翅膀下的隱密處! (細拉)
5 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.
上帝啊,你原是聽了我所許的願; 你將產業賜給敬畏你名的人。
6 ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.
你要加添王的壽數; 他的年歲必存到世世。
7 ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
他必永遠坐在上帝面前; 願你預備慈愛和誠實保佑他!
8 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.
這樣,我要歌頌你的名,直到永遠, 好天天還我所許的願。

< ಕೀರ್ತನೆಗಳು 61 >