< ಕೀರ್ತನೆಗಳು 61 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.
in finem in hymnis David exaudi Deus deprecationem meam intende orationi meae
2 ೨ ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
a finibus terrae ad te clamavi dum anxiaretur cor meum in petra exaltasti me deduxisti me
3 ೩ ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
quia factus es spes mea turris fortitudinis a facie inimici
4 ೪ ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. (ಸೆಲಾ)
inhabitabo in tabernaculo tuo in saecula protegar in velamento alarum tuarum diapsalma
5 ೫ ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.
quoniam tu Deus meus exaudisti orationem meam dedisti hereditatem timentibus nomen tuum
6 ೬ ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.
dies super dies regis adicies annos eius usque in diem generationis et generationis
7 ೭ ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
permanet in aeternum in conspectu Dei misericordiam et veritatem quis requiret eius
8 ೮ ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.
sic psalmum dicam nomini tuo in saeculum saeculi ut reddam vota mea de die in diem