< ಕೀರ್ತನೆಗಳು 62 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.
Musiqi rəhbəri Yedutun üçün. Davudun məzmuru. Susan qəlbim yalnız Allahı gözləyir, Ondadır qurtuluşum.
2 ೨ ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
Yalnız Odur qayam, qurtuluşum, O mənim qalamdır, mən əsla sarsılmaram.
3 ೩ ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
İnsan divar kimi əyiləndə, Hasar kimi laxlayanda Nə vaxtadək üstünə hücum edəcəksiniz? Nə vaxtadək onu əzəcəksiniz?
4 ೪ ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. (ಸೆಲಾ)
Yalnız fikirləşirsiniz, onu nüfuzdan salaq, Çünki yalandan zövq alırsınız. Diliniz xeyir-dua söyləsə də, Qəlbiniz lənət yağdırır. (Sela)
5 ೫ ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
Ey qəlbim, sükutla Allahı gözlə, Çünki ümidim Ondadır.
6 ೬ ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
Qayam, qurtuluşum yalnız Odur, O mənim qalamdır, mən sarsılmaram.
7 ೭ ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
Qurtuluşum, şərəfim Allaha bağlıdır, Allah möhkəm qayam və pənahımdır.
8 ೮ ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. (ಸೆಲಾ)
Ey xalq, hər zaman Ona arxalan, Onun hüzurunda qəlbini açıb-boşalt, Çünki Allah bizim pənahımızdır! (Sela)
9 ೯ ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
Bəşər övladları yalnız bir nəfəsdir – İnsan övladları fanidir. Tərəzinin gözündə çəkərkən hamısı yuxarı qalxır, Çəkisi bir nəfəsdən yüngül gəlir.
10 ೧೦ ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
Heç zaman zorakılığınıza güvənməyin, Talan malına boş yerə ümid bağlamayın, Var-dövlətiniz artsa da, ona arxalanmayın.
11 ೧೧ ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
Allah bir dəfə dedi, Bunu iki dəfə eşitdim: Qüdrət Allahındır,
12 ೧೨ ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.
Ey Xudavənd, məhəbbət Sənindir! Sən hər kəsə əməlinə görə əvəz verirsən!