< ಕೀರ್ತನೆಗಳು 62 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.
Katika ukimya ninamsubiri Mungu pekee; wokovu wangu watoka kwake.
2 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
Yeye pekee ni mwamba wangu na wokovu wangu; yeye ni mnara wangu mrefu; sitasogezwa kamwe.
3 ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
Mpaka lini, ninyi nyote, mtamshambulia mtu, ili kwamba mumpindue yeye kama ukuta ulio inama au kama fensi isiyo imara?
4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. (ಸೆಲಾ)
Wanashauliana naye ili tu kumshusha chini kutoka kwenye nafasi yake heshimiwa; wao wanapenda kuongea uongo; wanambariki yeye kwa midomo yao, lakini mioyoni mwao wana mlaani yeye. (Selah)
5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
Katika ukimya ninamsubiri Mungu pekee; kwa maana matumaini yangu yako kwake.
6 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
Yeye pekee ni mwamba wangu na wokovu wangu; yeye ni mnara wangu mrefu; sitasogezwa.
7 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
Na Mungu ni wokovu wangu na utukufu wangu; mwamba wa nguvu yangu na kimbilio langu salama liko katika Mungu.
8 ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. (ಸೆಲಾ)
Mwaminini Mungu wakati wote, ninyi watu; mimina moyo wako mbele zake; Mungu ni kimbilio salama kwa ajili yetu. (Selah)
9 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
Hakika watu wenye msimamo mdogo ni ubatili, na watu wenye msimamo mkubwa ni waongo; wao watakuwa wepesi kwenye mzani; uzito wao pamoja ni wepesi kuliko kitu chochote.
10 ೧೦ ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
Usiamini katika ukandamizaji au wizi; usitumainie utajiri, maana hawatazaa matunda; usiuweke moyo wako kwenye hivyo.
11 ೧೧ ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
Mungu ameongea mara moja, mara mbili nimesikia hili: nguvu ni za Mungu.
12 ೧೨ ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.
Pia kwako, Bwana, ni uaminifu wa agano, maana humlipa kila mtu kwa kile alichokifanya.

< ಕೀರ್ತನೆಗಳು 62 >