< ಕೀರ್ತನೆಗಳು 63 >
1 ೧ ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
Псалом Давиду, внегда быти ему в пустыни Иудейстей. Боже, Боже мой, к Тебе утренюю: возжада Тебе душа моя, коль множицею Тебе плоть моя, в земли пусте и непроходне и безводне.
2 ೨ ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.
Тако во святем явихся Тебе, видети силу Твою и славу Твою.
3 ೩ ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.
Яко лучши милость Твоя паче живот: устне мои похвалите Тя.
4 ೪ ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು.
Тако благословлю Тя в животе моем и о имени Твоем воздежу руце мои.
5 ೫ ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.
Яко от тука и масти да исполнится душа моя, и устнама радости восхвалят Тя уста моя.
6 ೬ ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
Аще поминах Тя на постели моей, на утренних поучахся в Тя:
7 ೭ ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.
яко был еси помощник мой, и в крове крилу Твоею возрадуюся.
8 ೮ ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು.
Прильпе душа моя по Тебе: мене же прият десница Твоя.
9 ೯ ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು.
Тии же всуе искаша душу мою: внидут в преисподняя земли: ()
10 ೧೦ ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು.
предадятся в руки оружия, части лисовом будут.
11 ೧೧ ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.
Царь же возвеселится о Бозе: похвалится всяк кленыйся Им, яко заградишася уста глаголющих неправедная.