< ಕೀರ್ತನೆಗಳು 64 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
Pour la fin, psaume de David. Exaucez, ô Dieu, ma prière, lorsque je vous supplie: de la crainte d’un ennemi délivrez mon âme.
2 ೨ ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.
Vous m’avez protégé contre l’assemblée des méchants, et contre la multitude de ceux qui opèrent l’iniquité.
3 ೩ ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
Parce qu’ils ont aiguisé leurs langues comme un glaive: ils ont tendu leur arc, chose amère,
4 ೪ ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
Afin de lancer des flèches dans les ténèbres, contre un innocent.
5 ೫ ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
Ils les lanceront soudainement contre lui, et ils ne craindront point: ils se sont affermis dans un discours pervers.
6 ೬ ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
Ils ont cherché avec soin des iniquités contre moi; ceux qui les cherchaient ont défailli dans ces recherches.
7 ೭ ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.
Mais Dieu sera exalté. Les plaies qu’ils ont faites sont devenues des flèches de petits enfants.
8 ೮ ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
Et leurs langues ont perdu leur force, en se tournant contre eux-mêmes. Tous ceux qui les voyaient ont été troublés,
9 ೯ ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
Et tout homme a été saisi de crainte. Et ils ont annoncé les œuvres de Dieu, et ils ont compris les choses qu’il a faites.
10 ೧೦ ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.
Le juste se réjouira dans le Seigneur, et il espérera en lui, et tous les hommes droits de cœur seront loués.