< ಕೀರ್ತನೆಗಳು 64 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
聖歌隊の指揮者によってうたわせたダビデの歌 神よ、わたしが嘆き訴えるとき、わたしの声をお聞きください。敵の恐れからわたしの命をお守りください。
2 ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.
わたしを隠して、悪を行う者のひそかなはかりごとから免れさせ、不義を行う者のはかりごとから免れさせてください。
3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
彼らはその舌をつるぎのようにとぎ、苦い言葉を矢のように放ち、
4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
隠れた所から罪なき者を射ようとする。にわかに彼を射て恐れることがない。
5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
彼らは悪い企てを固くたもち、共にはかり、ひそかにわなをかけて言う、「だれがわれらを見破ることができるか。
6 ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
だれがわれらの罪をたずね出すことができるか。われらは巧みに、はかりごとを考えめぐらしたのだ」と。人の内なる思いと心とは深い。
7 ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.
しかし神は矢をもって彼らを射られる。彼らはにわかに傷をうけるであろう。
8 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
神は彼らの舌のゆえに彼らを滅ぼされる。彼らを見る者は皆そのこうべを振るであろう。
9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
その時すべての人は恐れ、神のみわざを宣べ伝え、そのなされた事を考えるであろう。
10 ೧೦ ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.
正しい人は主にあって喜び、かつ主に寄り頼む。すべて心の直き者は誇ることができる。

< ಕೀರ್ತನೆಗಳು 64 >