< ಕೀರ್ತನೆಗಳು 65 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.
聖歌隊の指揮者によってうたわせたダビデの歌、さんび 神よ、シオンにて、あなたをほめたたえることはふさわしいことである。人はあなたに誓いを果すであろう。
2 ೨ ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.
3 ೩ ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.
祈を聞かれる方よ、すべての肉なる者は罪のゆえにあなたに来る。われらのとががわれらに打ち勝つとき、あなたはこれをゆるされる。
4 ೪ ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.
あなたに選ばれ、あなたに近づけられて、あなたの大庭に住む人はさいわいである。われらはあなたの家、あなたの聖なる宮の恵みによって飽くことができる。
5 ೫ ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.
われらの救の神よ、地のもろもろのはてと、遠き海の望みであるあなたは恐るべきわざにより、救をもってわれらに答えられる。
6 ೬ ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
あなたは大能を帯び、そのみ力によって、もろもろの山を堅く立たせられる。
7 ೭ ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.
あなたは海の響き、大波の響き、もろもろの民の騒ぎを静められる。
8 ೮ ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
それゆえ、地のはてに住む人々も、あなたのもろもろのしるしを見て恐れる。あなたは朝と夕の出る所をして喜び歌わせられる。
9 ೯ ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
あなたは地に臨んで、これに水をそそぎ、これを大いに豊かにされる。神の川は水で満ちている。あなたはそのように備えして彼らに穀物を与えられる。
10 ೧೦ ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.
あなたはその田みぞを豊かにうるおし、そのうねを整え、夕立ちをもってそれを柔らかにし、そのもえ出るのを祝福し、
11 ೧೧ ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.
またその恵みをもって年の冠とされる。あなたの道にはあぶらがしたたる。
12 ೧೨ ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.
野の牧場はしたたり、小山は喜びをまとい、
13 ೧೩ ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
牧場は羊の群れを着、もろもろの谷は穀物をもっておおわれ、彼らは喜び呼ばわって共に歌う。