< ಕೀರ್ತನೆಗಳು 66 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.
Voor muziekbegeleiding. Een lied; een psalm.
2 ೨ ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
Juich, heel de aarde, God ter ere, En prijs de glans van zijn Naam; Hef een heerlijk loflied aan,
3 ೩ ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
En zeg tot God: Hoe ontzaglijk uw werken! Om uw almacht moeten uw vijanden U vleien,
4 ೪ ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. (ಸೆಲಾ)
En moet heel de aarde U aanbidden, U ter eer een lofzang zingen, Glorie brengen aan uw Naam!
5 ೫ ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
Komt, en ziet de werken van God, Zijn wondere daden voor de kinderen der mensen:
6 ೬ ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
De zee legde Hij droog, En ze trokken te voet door de stroom! Laat ons in Hem ons verheugen,
7 ೭ ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. (ಸೆಲಾ)
Hij, die eeuwig heerst door zijn kracht; Hij houdt zijn oog op de volkeren gericht, En geen weerspannige durft tegen Hem opstaan.
8 ೮ ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
Zegent, volkeren, onzen God, Laat zijn loflied luid weerschallen;
9 ೯ ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
Hij is het, die ons in het leven hield, Onze voet niet liet wankelen.
10 ೧೦ ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
Toch hebt Gij ons beproefd, o mijn God, Ons gelouterd, als men zilver loutert;
11 ೧೧ ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
Gij hebt ons in ellende gedompeld, Ons rampen op de heupen gelegd.
12 ೧೨ ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
Gij hebt anderen ons op het hoofd doen zitten, We zijn door vuur en water gegaan: Maar eindelijk toch Hebt Gij ons uitkomst gebracht.
13 ೧೩ ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
Zo treed ik met offers binnen uw huis, Om te volbrengen wat ik U heb beloofd:
14 ೧೪ ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.
Wat mijn lippen hebben gesproken, Wat mijn mond in mijn nood heeft gezegd.
15 ೧೫ ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. (ಸೆಲಾ)
Vette lammeren draag ik U Als brandoffers op; En met de offergeur van rammen, Bied ik U runderen en bokken aan.
16 ೧೬ ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.
Komt nu en hoort, ik wil u allen verkonden, U, die God vreest, wat Hij aan mij heeft gedaan:
17 ೧೭ ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.
Nauwelijks riep ik Hem aan met mijn mond, Of ik had een danklied op mijn tong!
18 ೧೮ ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
Was ik mij kwaad bewust in mijn hart, Dan had de Heer mij niet verhoord:
19 ೧೯ ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.
Maar nu heeft God naar mij geluisterd, En op mijn smeken gelet!
20 ೨೦ ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.
Gezegend zij God, die mijn bede niet afwees, Mij zijn genade niet onthield!