< ಕೀರ್ತನೆಗಳು 67 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. (ಸೆಲಾ)
Al maestro de coro. Para instrumentos de cuerda. Salmo. Cántico. Dios tenga misericordia de nosotros y bendíganos; vuelva hacia nosotros su rostro sereno,
2 ೨ ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
para que sus caminos sean conocidos sobre la tierra, y su salvación entre todas las naciones.
3 ೩ ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
Alábente los pueblos, oh Dios, te alaben los pueblos todos.
4 ೪ ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. (ಸೆಲಾ)
Alégrense y salten de gozo las naciones, viéndote gobernar los pueblos con justicia y regir en la tierra a las naciones.
5 ೫ ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
Te alaben los pueblos, oh Dios, te alaben los pueblos todos.
6 ೬ ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
La tierra ha dado su fruto; nos bendijo Dios, el Dios nuestro.
7 ೭ ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
¡Que Dios nos bendiga y que le reverencien hasta los últimos confines del universo!