< ಕೀರ್ತನೆಗಳು 69 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
לַמְנַצֵּ֬חַ עַֽל־שׁוֹשַׁנִּ֬ים לְדָוִֽד׃ הוֹשִׁיעֵ֥נִי אֱלֹהִ֑ים כִּ֤י בָ֖אוּ מַ֣יִם עַד־נָֽפֶשׁ׃
2 ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.
טָבַ֤עְתִּי ׀ בִּיוֵ֣ן מְ֭צוּלָה וְאֵ֣ין מָעֳמָ֑ד בָּ֥אתִי בְמַעֲמַקֵּי־מַ֝֗יִם וְשִׁבֹּ֥לֶת שְׁטָפָֽתְנִי׃
3 ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.
יָגַ֣עְתִּי בְקָרְאִי֮ נִחַ֪ר גְּר֫וֹנִ֥י כָּל֥וּ עֵינַ֑י מְ֝יַחֵ֗ל לֵאלֹהָֽי׃
4 ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
רַבּ֤וּ ׀ מִשַּׂעֲר֣וֹת רֹאשִׁי֮ שֹׂנְאַ֪י חִ֫נָּ֥ם עָצְמ֣וּ מַ֭צְמִיתַי אֹיְבַ֣י שֶׁ֑קֶר אֲשֶׁ֥ר לֹא־גָ֝זַ֗לְתִּי אָ֣ז אָשִֽׁיב׃
5 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.
אֱֽלֹהִ֗ים אַתָּ֣ה יָ֭דַעְתָּ לְאִוַּלְתִּ֑י וְ֝אַשְׁמוֹתַ֗י מִמְּךָ֥ לֹא־נִכְחָֽדוּ׃
6 ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.
אַל־יֵ֘בֹ֤שׁוּ בִ֨י ׀ קֹוֶיךָ֮ אֲדֹנָ֥י יְהוִ֗ה צְבָ֫א֥וֹת אַל־יִכָּ֣לְמוּ בִ֣י מְבַקְשֶׁ֑יךָ אֱ֝לֹהֵ֗י יִשְׂרָאֵֽל׃
7 ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.
כִּֽי־עָ֭לֶיךָ נָשָׂ֣אתִי חֶרְפָּ֑ה כִּסְּתָ֖ה כְלִמָּ֣ה פָנָֽי׃
8 ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.
מ֭וּזָר הָיִ֣יתִי לְאֶחָ֑י וְ֝נָכְרִ֗י לִבְנֵ֥י אִמִּֽי׃
9 ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
כִּֽי־קִנְאַ֣ת בֵּיתְךָ֣ אֲכָלָ֑תְנִי וְחֶרְפּ֥וֹת ח֝וֹרְפֶ֗יךָ נָפְל֥וּ עָלָֽי׃
10 ೧೦ ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.
וָאֶבְכֶּ֣ה בַצּ֣וֹם נַפְשִׁ֑י וַתְּהִ֖י לַחֲרָפ֣וֹת לִֽי׃
11 ೧೧ ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು.
וָאֶתְּנָ֣ה לְבוּשִׁ֣י שָׂ֑ק וָאֱהִ֖י לָהֶ֣ם לְמָשָֽׁל׃
12 ೧೨ ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
יָשִׂ֣יחוּ בִ֭י יֹ֣שְׁבֵי שָׁ֑עַר וּ֝נְגִינ֗וֹת שׁוֹתֵ֥י שֵׁכָֽר׃
13 ೧೩ ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
וַאֲנִ֤י תְפִלָּתִֽי־לְךָ֨ ׀ יְהוָ֡ה עֵ֤ת רָצ֗וֹן אֱלֹהִ֥ים בְּרָב־חַסְדֶּ֑ךָ עֲ֝נֵ֗נִי בֶּאֱמֶ֥ת יִשְׁעֶֽךָ׃
14 ೧೪ ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.
הַצִּילֵ֣נִי מִ֭טִּיט וְאַל־אֶטְבָּ֑עָה אִנָּצְלָ֥ה מִ֝שֹּֽׂנְאַ֗י וּמִמַּֽעֲמַקֵּי־מָֽיִם׃
15 ೧೫ ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.
אַל־תִּשְׁטְפֵ֤נִי ׀ שִׁבֹּ֣לֶת מַ֭יִם וְאַל־תִּבְלָעֵ֣נִי מְצוּלָ֑ה וְאַל־תֶּאְטַר־עָלַ֖י בְּאֵ֣ר פִּֽיהָ׃
16 ೧೬ ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
עֲנֵ֣נִי יְ֭הוָה כִּי־ט֣וֹב חַסְדֶּ֑ךָ כְּרֹ֥ב רַ֝חֲמֶ֗יךָ פְּנֵ֣ה אֵלָֽי׃
17 ೧೭ ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.
וְאַל־תַּסְתֵּ֣ר פָּ֭נֶיךָ מֵֽעַבְדֶּ֑ךָ כִּֽי־צַר־לִ֝֗י מַהֵ֥ר עֲנֵֽנִי׃
18 ೧೮ ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.
קָרְבָ֣ה אֶל־נַפְשִׁ֣י גְאָלָ֑הּ לְמַ֖עַן אֹיְבַ֣י פְּדֵֽנִי׃
19 ೧೯ ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.
אַתָּ֤ה יָדַ֗עְתָּ חֶרְפָּתִ֣י וּ֭בָשְׁתִּי וּכְלִמָּתִ֑י נֶ֝גְדְּךָ֗ כָּל־צוֹרְרָֽי׃
20 ೨೦ ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
חֶרְפָּ֤ה ׀ שָֽׁבְרָ֥ה לִבִּ֗י וָֽאָ֫נ֥וּשָׁה וָאֲקַוֶּ֣ה לָנ֣וּד וָאַ֑יִן וְ֝לַמְנַחֲמִ֗ים וְלֹ֣א מָצָֽאתִי׃
21 ೨೧ ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
וַיִּתְּנ֣וּ בְּבָרוּתִ֣י רֹ֑אשׁ וְ֝לִצְמָאִ֗י יַשְׁק֥וּנִי חֹֽמֶץ׃
22 ೨೨ ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
יְהִֽי־שֻׁלְחָנָ֣ם לִפְנֵיהֶ֣ם לְפָ֑ח וְלִשְׁלוֹמִ֥ים לְמוֹקֵֽשׁ׃
23 ೨೩ ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ.
תֶּחְשַׁ֣כְנָה עֵ֭ינֵיהֶם מֵרְא֑וֹת וּ֝מָתְנֵ֗יהֶם תָּמִ֥יד הַמְעַֽד׃
24 ೨೪ ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.
שְׁפָךְ־עֲלֵיהֶ֥ם זַעְמֶ֑ךָ וַחֲר֥וֹן אַ֝פְּךָ֗ יַשִּׂיגֵֽם׃
25 ೨೫ ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ.
תְּהִי־טִֽירָתָ֥ם נְשַׁמָּ֑ה בְּ֝אָהֳלֵיהֶ֗ם אַל־יְהִ֥י יֹשֵֽׁב׃
26 ೨೬ ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
כִּֽי־אַתָּ֣ה אֲשֶׁר־הִכִּ֣יתָ רָדָ֑פוּ וְאֶל־מַכְא֖וֹב חֲלָלֶ֣יךָ יְסַפֵּֽרוּ׃
27 ೨೭ ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.
תְּֽנָה־עָ֭וֺן עַל־עֲוֺנָ֑ם וְאַל־יָ֝בֹ֗אוּ בְּצִדְקָתֶֽךָ׃
28 ೨೮ ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
יִ֭מָּחֽוּ מִסֵּ֣פֶר חַיִּ֑ים וְעִ֥ם צַ֝דִּיקִ֗ים אַל־יִכָּתֵֽבוּ׃
29 ೨೯ ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.
וַ֭אֲנִי עָנִ֣י וְכוֹאֵ֑ב יְשׁוּעָתְךָ֖ אֱלֹהִ֣ים תְּשַׂגְּבֵֽנִי׃
30 ೩೦ ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
אֲהַֽלְלָ֣ה שֵׁם־אֱלֹהִ֣ים בְּשִׁ֑יר וַאֲגַדְּלֶ֥נּוּ בְתוֹדָֽה׃
31 ೩೧ ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.
וְתִיטַ֣ב לַֽ֭יהוָה מִשּׁ֥וֹר פָּ֗ר מַקְרִ֥ן מַפְרִֽיס׃
32 ೩೨ ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.
רָא֣וּ עֲנָוִ֣ים יִשְׂמָ֑חוּ דֹּרְשֵׁ֥י אֱ֝לֹהִ֗ים וִיחִ֥י לְבַבְכֶֽם׃
33 ೩೩ ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.
כִּֽי־שֹׁמֵ֣עַ אֶל־אֶבְיוֹנִ֣ים יְהוָ֑ה וְאֶת־אֲ֝סִירָ֗יו לֹ֣א בָזָֽה׃
34 ೩೪ ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.
יְֽ֭הַלְלוּהוּ שָׁמַ֣יִם וָאָ֑רֶץ יַ֝מִּ֗ים וְֽכָל־רֹמֵ֥שׂ בָּֽם׃
35 ೩೫ ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
כִּ֤י אֱלֹהִ֨ים ׀ י֘וֹשִׁ֤יעַ צִיּ֗וֹן וְ֭יִבְנֶה עָרֵ֣י יְהוּדָ֑ה וְיָ֥שְׁבוּ שָׁ֝֗ם וִירֵשֽׁוּהָ׃
36 ೩೬ ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.
וְזֶ֣רַע עֲ֭בָדָיו יִנְחָל֑וּהָ וְאֹהֲבֵ֥י שְׁ֝מ֗וֹ יִשְׁכְּנוּ־בָֽהּ׃

< ಕೀರ್ತನೆಗಳು 69 >