< ಕೀರ್ತನೆಗಳು 69 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
Salmo de Davi, para o regente, conforme “os lírios”: Salva-me, ó Deus, porque as águas têm entrado [e encoberto] a minha alma.
2 ೨ ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.
Afundei-me em um profundo lamaçal, onde não se pode ficar em pé; entrei nas profundezas das águas, e a corrente está me levando.
3 ೩ ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.
Já estou cansado de clamar, minha garganta enrouqueceu; meus olhos desfaleceram, enquanto espero pelo meu Deus.
4 ೪ ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
Os que me odeiam sem motivo são mais numerosos que os cabelos de minha cabeça; são poderosos os que procuram me arruinar, os que por falsidades se fazem meus inimigos; tive que pagar de volta aquilo que não furtei.
5 ೫ ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.
Tu, Deus, sabes como sou tolo; e meus pecados não estão escondidos perante ti.
6 ೬ ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.
Não sejam envergonhados por minha causa aqueles que te esperam, ó Senhor DEUS dos exércitos; não sejam humilhados por minha causa os que te buscam, ó Deus de Israel.
7 ೭ ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.
Porque por causa de ti aguentei ser insultado; a humilhação cobriu o meu rosto.
8 ೮ ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.
Tornei-me estranho aos meus irmãos; e desconhecido aos filhos de minha mãe;
9 ೯ ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
Porque o zelo por tua casa me devorou; e os insultos dos que te insultam caíram sobre mim;
10 ೧೦ ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.
Minha alma chorou e jejuou; porém [mais] insultos vieram sobre mim.
11 ೧೧ ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು.
Vesti-me de saco, mas fui ridicularizado por eles num ditado.
12 ೧೨ ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
Os que se sentam à porta falam [mal] de mim; e os bebedores de álcool cantam [piadas] contra mim.
13 ೧೩ ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
Mas eu oro a ti, SENHOR, [no] tempo aceitável. Pela grandeza de tua bondade, responde-me, ó Deus, pela fidelidade de tua salvação.
14 ೧೪ ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.
Livra-me do lamaçal, e não me deixes afundar; seja eu resgatado dos que me odeiam, e das profundezas das águas.
15 ೧೫ ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.
Não permitas que as correntes de águas me cubram, e que a profundeza não me devore, nem o poço feche sua boca sobre mim.
16 ೧೬ ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
Responde-me, SENHOR; pois boa é tua bondade; olha para mim conforme tua piedade.
17 ೧೭ ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.
E não escondas teu rosto de teu servo; porque estou angustiado; ouve-me depressa.
18 ೧೮ ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.
Vem para perto de minha alma, [e] a liberta; resgata-me por causa de meus inimigos.
19 ೧೯ ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.
Tu conheces como me insultam, me envergonham e me humilham; diante de ti estão todos os meus adversários.
20 ೨೦ ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
Insultos têm quebrado meu coração, e estou fraquíssimo; e esperei compaixão, porém [houve] nenhuma; [também esperei] por pessoas que me consolassem, mas não os achei.
21 ೨೧ ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
Deram-me fel como alimento; e em minha sede me deram vinagre para beber.
22 ೨೨ ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
Torne-se a mesa diante deles como que um laço; e aquilo que [lhes] dá segurança [lhes] seja uma armadilha.
23 ೨೩ ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ.
Sejam escurecidos os olhos deles, para que não possam ver; e que seus quadris vacilem continuamente.
24 ೨೪ ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.
Derrama tua indignação sobre eles; e que sejam tomados pelo ardor de tua ira.
25 ೨೫ ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ.
A habitação deles seja desolada; e que não haja morador nas tendas deles;
26 ೨೬ ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
Porque perseguem [aquele] a quem tu feriste, e contam histórias da dor daqueles a quem tu machucaste.
27 ೨೭ ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.
Conta como maldade a maldade deles; e não sejam eles agraciados por tua justiça.
28 ೨೮ ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
Sejam riscados dos livro da vida; e não estejam eles escritos junto com os justos.
29 ೨೯ ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.
Mas eu [estou] miserável e em dores; ó Deus, que tua salvação me proteja.
30 ೩೦ ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
Louvarei o nome de Deus com cântico; e o engrandecerei com agradecimentos.
31 ೩೧ ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.
Isto agradará ao SENHOR mais do que [o sacrifício] de um boi [ou] de um bezerro com chifres e unhas.
32 ೩೨ ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.
Os mansos verão, e se alegrarão; vós que buscais a Deus, vosso coração viverá.
33 ೩೩ ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.
Porque o SENHOR ouve aos necessitados, e não despreza os prisioneiros que lhe pertencem.
34 ೩೪ ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.
Louvem a ele os céus, a terra, os mares, e tudo que neles se move;
35 ೩೫ ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
Porque Deus salvará a Sião, e construirá as cidades de Judá; e habitarão ali, e a terão como posse.
36 ೩೬ ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.
E a semente de seus servos a herdará; e os que amam o nome dele habitarão nela.