< ಕೀರ್ತನೆಗಳು 7 >
1 ೧ ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.
【苦中投奔於主】 達味有感於本雅明族人的話,向上主唱流離之歌。 上主,我的天主!我一心投奔你;求你助我逃脫一切追逐我的人,求你救拔我;
2 ೨ ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.
免得有人像獅子一般撕裂我時,無人搭救我。
3 ೩ ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,
上主!如果我真做了這事,我主!在我手中就真有罪!
4 ೪ ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;
我若真加害過我的友好,或無故把我的仇敵劫掠;
5 ೫ ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. (ಸೆಲಾ)
就讓敵人追逐我,擒獲我,把我的性命踐踏在污地,將我的光榮歸諸於泥灰。
6 ೬ ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
上主,求你震怒奮起,前來克制我仇的暴慢。我的天主,求你醒起助我,施行你定的斷案。
7 ೭ ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು.
願萬民聚齊環繞著你。願你回駕由高處鑒視。
8 ೮ ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
上主,萬民的審判者! 上主,請照我的正義,請按我的無罪,護衛我的權利。
9 ೯ ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
公義的天主! 惟你洞察肺腑和人心,願惡人的毒害停止,求你堅固義人!
10 ೧೦ ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.
天主是我的護盾,給心正的人助陣。
11 ೧೧ ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.
天主是公義的審判者,對怙惡的人終日怒嚇。
12 ೧೨ ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
仇人雖然磨刀擦劍,開弓拉弦準備射箭;
13 ೧೩ ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.
那只是為自己預備死亡的武器,為自己製造帶火的箭矢。
14 ೧೪ ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.
試看,他既孕惡懷毒,自然就要產生虛無,
15 ೧೫ ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.
他挖掘坑穴,擺布陷阱,勢必落在自備的窖中。
16 ೧೬ ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
他的兇惡必反轉到自己頭上,他的橫暴必降落在自己的頂上。
17 ೧೭ ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
我要稱謝上主的公道,歌頌至高上主的名號。