< ಕೀರ್ತನೆಗಳು 7 >

1 ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.
(다윗의 식가욘. 베냐민인 구시의 말에 대하여 여호와께 한 노래) 여호와 내 하나님이여, 주께 피하오니 나를 쫓는 모든 자에게서 나를 구하여 건지소서
2 ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.
건져낼 자 없으면 저희가 사자 같이 나를 찢고 뜯을까 하나이다
3 ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,
여호와 내 하나님이여, 내가 이것을 행하였거나 내 손에 죄악이 있거나
4 ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;
화친한 자를 악으로 갚았거나 내 대적에게 무고히 빼앗았거든
5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. (ಸೆಲಾ)
원수로 나의 영혼을 쫓아 잡아 내 생명을 땅에 짓밟고 내 영광을 진토에 떨어뜨리게 하소서 (셀라)
6 ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
여호와여, 진노로 일어나사 내 대적들의 노를 막으시며 나를 위하여 깨소서 주께서 심판을 명하셨나이다
7 ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು.
민족들의 집회로 주를 두르게 하시고 그 위 높은 자리에 돌아오소서
8 ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
여호와께서 만민에게 심판을 행하시오니 여호와여, 나의 의와 내게 있는 성실함을 따라 나를 판단하소서
9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
악인의 악을 끊고 의인을 세우소서 의로우신 하나님이 사람의 심장을 감찰하시나이다
10 ೧೦ ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.
나의 방패는 마음이 정직한 자를 구원하시는 하나님께 있도다
11 ೧೧ ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.
하나님은 의로우신 재판장이심이여, 매일 분노하시는 하나님이시로다
12 ೧೨ ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
사람이 회개치 아니하면 저가 그 칼을 갈으심이여 그 활을 이미 당기어 예비하셨도다
13 ೧೩ ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.
죽일 기계를 또한 예비하심이여 그 만든 살은 화전이로다
14 ೧೪ ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.
악인이 죄악을 해산함이여 잔해를 잉태하며 궤휼을 낳았도다
15 ೧೫ ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.
저가 웅덩이를 파 만듦이여 제가 만든 함정에 빠졌도다
16 ೧೬ ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
그 잔해는 자기 머리로 돌아오고 그 포학은 자기 정수리에 내리리로다
17 ೧೭ ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
내가 여호와의 의를 따라 감사함이여 지극히 높으신 여호와의 이름을 찬양하리로다!

< ಕೀರ್ತನೆಗಳು 7 >