< ಕೀರ್ತನೆಗಳು 70 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.
A karmesternek. Dávidtól. Emlékeztetésül. Isten, megmentésemre, Örökkévaló, segítségemre siess!
2 ೨ ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
Szégyenűljenek meg és gyalázásúl legyenek, a kik lelkemre törnek; hátráljanak meg és piruljanak el, a kik bajomat kívánják.
3 ೩ ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
Forduljanak vissza szégyenük miatt, kik azt mondják: Hah, hah!
4 ೪ ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.
Örvendjenek és örüljenek mind a te keresőid, és mondják mindig: nagy az Isten! a kik szeretik segítségedet!
5 ೫ ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
Én pedig szegény vagyok és szűkölködő, Isten siess felém; segítségem és szabadítóm vagy, Örökkévaló, ne késsél!