< ಕೀರ್ತನೆಗಳು 70 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.
Bjargaðu mér, ó Guð! Flýttu þér Drottinn, að hjálpa mér!
2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
Óvinir mínir sækjast eftir lífi mínu og njóta þess að kvelja mig.
3 ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
Rektu þá burt með skömm! Stöðvaðu þá! Láttu þá ekki hæða mig og spotta.
4 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.
Allir þeir sem leita Guðs skulu fagna og gleðjast. Þeir sem elska hjálpræði þitt hrópi: „Lofaður sé Guð!“
5 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
En ég er í miklum vanda ó, Guð! Flýttu þér að hjálpa mér! Þú ert sá eini sem getur bjargað. Drottinn minn, láttu það ekki dragast!

< ಕೀರ್ತನೆಗಳು 70 >