< ಕೀರ್ತನೆಗಳು 72 >
1 ೧ ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
Para SalomãoDeus, dá teus juízos ao rei, e tua justiça ao filho do rei.
2 ೨ ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
Ele julgará a teu povo com justiça, e a teus aflitos com juízo.
3 ೩ ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
Os montes trarão paz ao povo, e os morros [trarão] justiça.
4 ೪ ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
Ele julgará os pobres do povo, livrará os filhos do necessitado, e quebrará o opressor.
5 ೫ ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವರು ನಿನಗೆ ಭಯಪಡಲಿ.
Temerão a ti enquanto durarem o sol e a luz, geração após geração.
6 ೬ ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
Ele descerá como chuva sobre a [erva] cortada, como as chuvas que regam a terra.
7 ೭ ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
Em seus dias o justo florescerá, e [haverá] abundância de paz, até que não [haja] mais a lua.
8 ೮ ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
E ele terá domínio de mar a mar; e desde o rio até os limites da terra.
9 ೯ ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.
Os moradores dos desertos se inclinarão perante sua presença, e seus inimigos lamberão o pó da terra.
10 ೧೦ ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
Os reis de Társis e das ilhas trarão presentes; os reis de Sabá e Seba apresentarão bens.
11 ೧೧ ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
E todos os reis se inclinarão a ele; todas as nações o servirão;
12 ೧೨ ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
Porque ele livrará ao necessitado que clamar, e também ao aflito que não tem quem o ajude.
13 ೧೩ ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
Ele será piedoso para o pobre e necessitado, e salvará as almas dos necessitados.
14 ೧೪ ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
Ele livrará suas almas da falsidade e da violência, e o sangue deles lhe será precioso.
15 ೧೫ ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
E ele viverá; e lhe darão ouro de Sabá, e continuamente orarão por ele; o dia todo o bendirão.
16 ೧೬ ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
Haverá bastante trigo na terra sobre os cumes dos montes; seu fruto brotará como o Líbano; e desde a cidade florescerão como a erva da terra.
17 ೧೭ ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
Seu nome permanecerá para sempre; enquanto o sol durar, seu nome continuará; e se bendirão nele; todas as nações o chamarão de bem-aventurado.
18 ೧೮ ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.
Bendito [seja] o SENHOR Deus, o Deus de Israel! Somente ele faz [tais] maravilhas!
19 ೧೯ ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
E bendito seja seu glorioso nome eternamente; e que sua glória encha toda a terra! Amem, e amém!
20 ೨೦ ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.
[Aqui] terminam as orações de Davi, filho de Jessé.