< ಕೀರ್ತನೆಗಳು 75 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು. ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
아삽의 시, 영장으로 알다스헷에 맞춘 노래 하나님이여 우리가 주께 감사하고 감사함은 주의 이름이 가까움이라 사람들이 주의 기사를 전파하나이다
2 ೨ ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.
주의 말씀이 내가 정한 기약을 당하면 정의로 판단하리니
3 ೩ ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. (ಸೆಲಾ)
땅의 기둥은 내가 세웠거니와 땅과 그 모든 거민이 소멸되리라 하시도다(셀라)
4 ೪ ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
내가 오만한 자더러 오만히 행치말라 하며 행악자더러 뿔을 들지 말라 하였노니
5 ೫ ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.
너희 뿔을 높이 들지 말며 교만한 목으로 말하지 말지어다
6 ೬ ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.
대저 높이는 일이 동에서나 서에서 말미암지 아니하며 남에서도 말미암지 아니하고
7 ೭ ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
오직 재판장이신 하나님이 이를 낮추시고 저를 높이시느니라
8 ೮ ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
여호와의 손에 잔이 있어 술 거품이 일어나는도다 속에 섞은 것이 가득한 그 잔을 하나님이 쏟아 내시나니 실로 그 찌끼까지도 땅의 모든 악인이 기울여 마시리로다
9 ೯ ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
나는 야곱의 하나님을 영원히 선포하며 찬양하며
10 ೧೦ ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.
또 악인의 뿔을 다 베고 의인의 뿔은 높이 들리로다