< ಕೀರ್ತನೆಗಳು 76 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.
Начальнику хора. На струнных орудиях. Псалом Асафа. Песнь. Ведом в Иудее Бог; у Израиля велико имя Его.
2 ೨ ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
И было в Салиме жилище Его и пребывание Его на Сионе.
3 ೩ ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. (ಸೆಲಾ)
Там сокрушил Он стрелы лука, щит и меч и брань.
4 ೪ ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
Ты славен, могущественнее гор хищнических.
5 ೫ ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
Крепкие сердцем стали добычею, уснули сном своим, и не нашли все мужи силы рук своих.
6 ೬ ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
От прещения Твоего, Боже Иакова, вздремали и колесница и конь.
7 ೭ ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
Ты страшен, и кто устоит пред лицем Твоим во время гнева Твоего?
8 ೮ ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
С небес Ты возвестил суд; земля убоялась и утихла,
9 ೯ ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. (ಸೆಲಾ)
когда восстал Бог на суд, чтобы спасти всех угнетенных земли.
10 ೧೦ ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
И гнев человеческий обратится во славу Тебе: остаток гнева Ты укротишь.
11 ೧೧ ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
Делайте и воздавайте обеты Господу, Богу вашему; все, которые вокруг Него, да принесут дары Страшному:
12 ೧೨ ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.
Он укрощает дух князей, Он страшен для царей земных.