< ಕೀರ್ತನೆಗಳು 77 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.
to/for to conduct upon (Jeduthun *Q(K)*) to/for Asaph melody voice my to(wards) God and to cry voice my to(wards) God and to listen to(wards) me
2 ೨ ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
in/on/with day distress my Lord to seek hand my night to pour and not be numb to refuse to be sorry: comfort soul my
3 ೩ ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.
to remember God and to roar to muse and to enfeeble spirit my (Selah)
4 ೪ ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
to grasp waking eye my to trouble and not to speak: speak
5 ೫ ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
to devise: think day from front: old year forever: antiquity
6 ೬ ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,
to remember music my in/on/with night with heart my to muse and to search spirit my
7 ೭ “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
to/for forever: enduring to reject Lord and not to add: again to/for to accept still
8 ೮ ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
to end to/for perpetuity kindness his to cease word to/for generation and generation
9 ೯ ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು (ಸೆಲಾ)
to forget be gracious God if: surely no to gather in/on/with face: anger compassion his (Selah)
10 ೧೦ ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
and to say be weak: grieved I he/she/it year right Most High
11 ೧೧ ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
(to remember *Q(K)*) deed LORD for to remember from front: old wonder your
12 ೧೨ ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
and to mutter in/on/with all work your and in/on/with wantonness your to muse
13 ೧೩ ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
God in/on/with holiness way: conduct your who? god great: large like/as God
14 ೧೪ ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
you(m. s.) [the] God to make: do wonder to know in/on/with people strength your
15 ೧೫ ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. (ಸೆಲಾ)
to redeem: redeem in/on/with arm people your son: descendant/people Jacob and Joseph (Selah)
16 ೧೬ ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.
to see: see you water God to see: see you water to twist: writh in pain also to tremble abyss
17 ೧೭ ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
to flood water cloud voice: thunder to give: cry out cloud also arrow your to go: walk
18 ೧೮ ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.
voice: sound thunder your in/on/with wheel to light lightning world to tremble and to shake [the] land: country/planet
19 ೧೯ ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
in/on/with sea way: journey your (and path your *Q(K)*) in/on/with water many and heel your not to know
20 ೨೦ ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
to lead like/as flock people your in/on/with hand Moses and Aaron