< ಕೀರ್ತನೆಗಳು 79 >

1 ಆಸಾಫನ ಕೀರ್ತನೆ. ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
आसाप का भजन हे परमेश्वर, अन्यजातियाँ तेरे निज भाग में घुस आईं; उन्होंने तेरे पवित्र मन्दिर को अशुद्ध किया; और यरूशलेम को खण्डहर कर दिया है।
2 ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.
उन्होंने तेरे दासों की शवों को आकाश के पक्षियों का आहार कर दिया, और तेरे भक्तों का माँस पृथ्वी के वन-पशुओं को खिला दिया है।
3 ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.
उन्होंने उनका लहू यरूशलेम के चारों ओर जल के समान बहाया, और उनको मिट्टी देनेवाला कोई न था।
4 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
पड़ोसियों के बीच हमारी नामधराई हुई; चारों ओर के रहनेवाले हम पर हँसते, और ठट्ठा करते हैं।
5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?
हे यहोवा, कब तक? क्या तू सदा के लिए क्रोधित रहेगा? तुझ में आग की सी जलन कब तक भड़कती रहेगी?
6 ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು.
जो जातियाँ तुझको नहीं जानती, और जिन राज्यों के लोग तुझ से प्रार्थना नहीं करते, उन्हीं पर अपनी सब जलजलाहट भड़का!
7 ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.
क्योंकि उन्होंने याकूब को निगल लिया, और उसके वासस्थान को उजाड़ दिया है।
8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.
हमारी हानि के लिये हमारे पुरखाओं के अधर्म के कामों को स्मरण न कर; तेरी दया हम पर शीघ्र हो, क्योंकि हम बड़ी दुर्दशा में पड़े हैं।
9 ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
हे हमारे उद्धारकर्ता परमेश्वर, अपने नाम की महिमा के निमित्त हमारी सहायता कर; और अपने नाम के निमित्त हमको छुड़ाकर हमारे पापों को ढाँप दे।
10 ೧೦ ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.
१०अन्यजातियाँ क्यों कहने पाएँ कि उनका परमेश्वर कहाँ रहा? तेरे दासों के खून का पलटा अन्यजातियों पर हमारी आँखों के सामने लिया जाए।
11 ೧೧ ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
११बन्दियों का कराहना तेरे कान तक पहुँचे; घात होनेवालों को अपने भुजबल के द्वारा बचा।
12 ೧೨ ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.
१२हे प्रभु, हमारे पड़ोसियों ने जो तेरी निन्दा की है, उसका सात गुणा बदला उनको दे!
13 ೧೩ ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.
१३तब हम जो तेरी प्रजा और तेरी चराई की भेड़ें हैं, तेरा धन्यवाद सदा करते रहेंगे; और पीढ़ी से पीढ़ी तक तेरा गुणानुवाद करते रहेंगे।

< ಕೀರ್ತನೆಗಳು 79 >