< ಕೀರ್ತನೆಗಳು 8 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.
【人的尊威】 達味詩歌,交與槳官。調寄「加特」。 上主,我們的主!你的名號在普世何其美妼!你的尊榮在天上彰顯光耀。
2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
由赤子乳兒的口中,你取得完美的讚頌;為使恨你的人受辱,為使仇敵有口無用。
3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
當我仰望你手指創造的穹蒼,和你在天上布置的星辰月亮,
4 ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
世人算什麼,你竟對他懷念不忘?人子算什麼,你竟對他眷顧周詳?
5 ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
竟使他稍微遜於天神,以尊貴光榮作他冠冕,
6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.
令他統治你手的造化,將一切放在他的腳下:
7 ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,
所有的羊和牛,與野外的走獸,
8 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
天空的飛鳥和海裏的魚類,及種種游泳於海道的水族。
9 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
上主,我們的主!你的名號在普世何其美妙!

< ಕೀರ್ತನೆಗಳು 8 >