< ಕೀರ್ತನೆಗಳು 8 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.
A karmesternek, a Gittítre. Zsoltár Dávidtól. Örökkévaló, mi Urunk, mily hatalmas a neved az Egész földön, a ki fenségedet tetted az egekre!
2 ೨ ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
Kisdedek és csecsemők szájából alapítottál hatalmat, elleneid miatt, hogy elnémíts ellenséget és boszúvágyót.
3 ೩ ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
Midőn látom egeidet, újjaid művét, holdat és csillagokat, melyeket megszilárdítottál -:
4 ೪ ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
mi a halandó, hogy megemlékszel róla, és az ember fia, hogy gondolsz reá?
5 ೫ ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
Kevéssel tetted csekélyebbé Istennél, dicsőséggel és díszszel koronáztad;
6 ೬ ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.
uralkodóvá tetted kezed művein, mindet lábai alá helyezted:
7 ೭ ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,
juhokat és ökröket mindmegannyit, s a mező állatait is,
8 ೮ ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
az ég madarát, s a tenger halait – átkel ő tengerek ösvényein.
9 ೯ ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
Örökkévaló, mi Urunk, mily hatalmas a te neved az egész földön!