< ಕೀರ್ತನೆಗಳು 80 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ. ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
Kwa mwimbishaji. Mtindo wa “Yungiyungi za Agano.” Zaburi ya Asafu. Ee Mchungaji wa Israeli tusikie, wewe umwongozaye Yosefu kama kundi; wewe uketiye katika kiti cha enzi katikati ya makerubi, angaza
2 ೨ ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು.
mbele ya Efraimu, Benyamini na Manase. Uamshe nguvu zako, uje utuokoe.
3 ೩ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
Ee Mungu, uturejeshe, utuangazie uso wako, ili tuweze kuokolewa.
4 ೪ ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?
Ee Bwana Mungu Mwenye Nguvu Zote, hata lini hasira yako itawaka na kufoka moshi dhidi ya maombi ya watu wako?
5 ೫ ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.
Umewalisha kwa mkate wa machozi, umewafanya wanywe machozi bakuli tele.
6 ೬ ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
Tumekuwa chanzo cha ugomvi kwa jirani zetu, na adui zetu wanatudhihaki.
7 ೭ ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
Ee Mungu Mwenye Nguvu Zote, uturejeshe; utuangazie uso wako, nasi tuweze kuokolewa.
8 ೮ ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.
Ulileta mzabibu kutoka Misri, ukawafukuza mataifa, ukaupanda.
9 ೯ ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
Uliandaa shamba kwa ajili yake, mizizi ikawa imara, ukajaza nchi.
10 ೧೦ ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.
Milima ilifunikwa kwa kivuli chake, matawi yake yakafunika mierezi mikubwa.
11 ೧೧ ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.
Matawi yake yalienea mpaka Baharini, machipukizi yake mpaka kwenye Mto.
12 ೧೨ ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
Mbona umebomoa kuta zake ili wote wapitao karibu wazichume zabibu zake?
13 ೧೩ ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
Nguruwe mwitu wanauharibu na wanyama wa kondeni hujilisha humo.
14 ೧೪ ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
Turudie, Ee Mungu Mwenye Nguvu Zote! Tazama chini kutoka mbinguni na uone! Linda mzabibu huu,
15 ೧೫ ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
mche ulioupanda kwa mkono wako wa kuume, mwana uliyemlea kwa ajili yako mwenyewe.
16 ೧೬ ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
Mzabibu wako umekatwa, umechomwa moto, unapowakemea, watu wako huangamia.
17 ೧೭ ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.
Mkono wako na utulie juu ya mtu aliyeko mkono wako wa kuume, mwana wa mtu uliyemlea kwa ajili yako mwenyewe.
18 ೧೮ ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.
Ndipo hatutakuacha tena, utuhuishe, nasi tutaliitia jina lako.
19 ೧೯ ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
Ee Bwana Mungu Mwenye Nguvu Zote, uturejeshe; utuangazie uso wako, ili tuweze kuokolewa.