< ಕೀರ್ತನೆಗಳು 82 >

1 ಆಸಾಫನ ಕೀರ್ತನೆ. ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
かみは神のつどひの中にたちたまふ 神はもろもろの神のなかに審判をなしたまふ
2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? (ಸೆಲಾ)
なんぢらは正からざる審判をなし あしきものの身をかたよりみて幾何時をへんとするや (セラ)
3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
よわきものと孤兒とのためにさばき苦しむものと乏しきものとのために公平をほどこせ
4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
弱きものと貧しきものとをすくひ彼等をあしきものの手よりたすけいだせ
5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
かれらは知ることなく悟ることなくして暗中をゆきめぐりぬ 地のもろもろの基はうごきたり
6 “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
我いへらく なんぢらは神なりなんぢらはみな至上者の子なりと
7 ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು.
然どなんぢらは人のごとくに死もろもろの侯のなかの一人のごとく仆れん
8 ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?
神よおきて全地をさばきたまへ 汝もろもろの國を嗣たまふべければなり

< ಕೀರ್ತನೆಗಳು 82 >