< ಕೀರ್ತನೆಗಳು 82 >
1 ೧ ಆಸಾಫನ ಕೀರ್ತನೆ. ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
Zaburi ya Asafu. Mungu anaongoza kusanyiko kuu, anatoa hukumu miongoni mwa “miungu”:
2 ೨ “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? (ಸೆಲಾ)
“Hata lini utaendelea kuwatetea wasio haki na kuonyesha upendeleo kwa waovu?
3 ೩ ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
Teteeni wanyonge na yatima, tunzeni haki za maskini na walioonewa.
4 ೪ ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
Mwokoeni mnyonge na mhitaji, wakomboeni kutoka mkononi mwa mwovu.
5 ೫ ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
“Hawajui lolote, hawaelewi lolote. Wanatembea gizani; misingi yote ya dunia imetikisika.
6 ೬ “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
“Nilisema, ‘Ninyi ni “miungu”; ninyi nyote ni wana wa Aliye Juu Sana.’
7 ೭ ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು.
Lakini mtakufa kama wanadamu wa kawaida; mtaanguka kama mtawala mwingine yeyote.”
8 ೮ ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?
Ee Mungu, inuka uihukumu nchi, kwa kuwa mataifa yote ni urithi wako.