< ಕೀರ್ತನೆಗಳು 83 >
1 ೧ ಆಸಾಫನ ಕೀರ್ತನೆ; ಗೀತೆ. ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.
Ó Deus, não estejas em silencio; não te cales, nem te aquietes, ó Deus.
2 ೨ ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.
Porque eis que teus inimigos fazem tumulto, e os que te aborrecem levantaram a cabeça.
3 ೩ ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,
Tomaram astuto conselho contra o teu povo, e consultavam contra os teus escondidos.
4 ೪ “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.
Disseram: Vinde, e desarreiguemol-os para que não sejam nação, nem haja mais memoria do nome de Israel.
5 ೫ ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,
Porque consultaram juntos e unanimes; elles se alliam contra ti:
6 ೬ ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,
As tendas de Edom, e dos ismaelitas, de Moab, e dos agarenos,
7 ೭ ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;
De Gebal, e de Ammon, e de Amalek, de Palestina, com os moradores de Tyro.
8 ೮ ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. (ಸೆಲಾ)
Tambem Assyria se ajuntou com elles: foram ajudar aos filhos de Lot (Selah)
9 ೯ ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.
Faze-lhes como aos madianitas; como a Sisera, como a Jabin na ribeira de Kison.
10 ೧೦ ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
Os quaes pereceram em Endor; tornaram-se como estrume para a terra.
11 ೧೧ ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
Faze aos seus nobres como a Oreb, e como a Zeeb e a todos os seus principes, como a Zebah e como a Zalmuna;
12 ೧೨ ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.
Que disseram: Tomemos para nós as casas de Deus em possessão.
13 ೧೩ ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
Deus meu, faze-os como um tufão, como a aresta diante do vento.
14 ೧೪ ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
Como o fogo que queima um bosque, e como a chamma que incendeia as brenhas,
15 ೧೫ ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.
Assim os persegue com a tua tempestade, e os assombra com o teu torvelinho.
16 ೧೬ ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.
Encham-se de vergonha as suas faces, para que busquem o teu nome, Senhor.
17 ೧೭ ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.
Confundam-se e assombrem-se perpetuamente; envergonhem-se, e pereçam.
18 ೧೮ ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.
Para que saibam que tu, a quem só pertence o nome de Jehovah, és o Altissimo sobre toda a terra.