< ಕೀರ್ತನೆಗಳು 84 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
to/for to conduct upon [the] Gittith to/for son: descendant/people Korah melody what? beloved tabernacle your LORD Hosts
2 ೨ ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
to long and also to end: expend soul my to/for court LORD heart my and flesh my to sing to(wards) God alive
3 ೩ ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
also bird to find house: home and swallow nest to/for her which to set: put young her with altar your LORD Hosts king my and God my
4 ೪ ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. (ಸೆಲಾ)
blessed to dwell house: home your still to boast: praise you (Selah)
5 ೫ ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ,
blessed man strength to/for him in/on/with you highway in/on/with heart their
6 ೬ ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
to pass in/on/with Valley (of Topheth) [the] (Tophet of) Baca spring to set: make him also blessing to enwrap rain/teacher
7 ೭ ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
to go: went from strength to(wards) strength to see: see to(wards) God in/on/with Zion
8 ೮ “ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. (ಸೆಲಾ)
LORD God Hosts to hear: hear [emph?] prayer my to listen [emph?] God Jacob (Selah)
9 ೯ ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.
shield our to see: see God and to look face anointed your
10 ೧೦ ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
for pleasant day in/on/with court your from thousand to choose to stand in/on/with house: temple God my from to dwell in/on/with tent wickedness
11 ೧೧ ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
for sun and shield LORD God favor and glory to give: give LORD not to withhold good to/for to go: walk in/on/with unblemished: blameless
12 ೧೨ ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
LORD Hosts blessed man to trust in/on/with you