< ಕೀರ್ತನೆಗಳು 85 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.
Voor muziekbegeleiding. Een psalm van de zonen van Kore. Jahweh, Gij hebt weer uw land begenadigd, En het lot van Jakob ten beste gekeerd;
2 ೨ ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. (ಸೆಲಾ)
Gij hebt uw volk zijn schuld vergeven, En al zijn zonden bedekt,
3 ೩ ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
Heel uw gramschap laten varen, Geblust de gloed van uw toorn.
4 ೪ ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
Richt ons dan op, o God van ons heil, En leg uw wrevel over ons af!
5 ೫ ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
Of zoudt Gij voor eeuwig op ons vertoornd willen zijn, Verbolgen blijven van geslacht tot geslacht,
6 ೬ ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
En niet liever ons laten herleven, Opdat uw volk zich in U kan verheugen?
7 ೭ ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
Toon ons uw goedheid, o Jahweh, En schenk ons uw heil!
8 ೮ ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
Ik wil horen wat Jahweh mij zegt; Want Hij spreekt woorden van vrede Voor zijn volk en zijn vromen, Voor die op Hem blijven hopen!
9 ೯ ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
Waarachtig; zijn heil is nabij aan hen, die Hem vrezen, En zijn heerlijkheid woont in ons Land.
10 ೧೦ ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
Genade en trouw ontmoeten elkander, Gerechtigheid en vrede omhelzen elkaar:
11 ೧೧ ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
De trouw ontspruit aan de aarde, De gerechtigheid blikt uit de hemel.
12 ೧೨ ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.
Jahweh zelf schenkt zijn zegen, En ons Land geeft zijn oogst;
13 ೧೩ ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.
Gerechtigheid gaat voor Hem uit, En geluk volgt zijn schreden!