< ಕೀರ್ತನೆಗಳು 86 >
1 ೧ ದಾವೀದನ ಕೀರ್ತನೆ. ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.
Davut'un duası Kulak ver, ya RAB, yanıtla beni, Çünkü mazlum ve yoksulum.
2 ೨ ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.
Koru canımı, çünkü senin sadık kulunum. Ey Tanrım, kurtar sana güvenen kulunu!
3 ೩ ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.
Acı bana, ya Rab, Çünkü gün boyu sana yakarıyorum.
4 ೪ ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.
Sevindir kulunu, ya Rab, Çünkü dualarımı sana yükseltiyorum.
5 ೫ ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
Sen iyi ve bağışlayıcısın, ya Rab, Sana yakaran herkese bol sevgi gösterirsin.
6 ೬ ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.
Kulak ver duama, ya RAB, Yalvarışlarımı dikkate al!
7 ೭ ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.
Sıkıntılı günümde sana yakarırım, Çünkü yanıtlarsın beni.
8 ೮ ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.
İlahlar arasında senin gibisi yok, ya Rab, Eşsizdir işlerin.
9 ೯ ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
Yarattığın bütün uluslar gelip Sana tapınacaklar, ya Rab, Adını yüceltecekler.
10 ೧೦ ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.
Çünkü sen ulusun, harikalar yaratırsın, Tek Tanrı sensin.
11 ೧೧ ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.
Ya RAB, yolunu bana öğret, Senin gerçeğine göre yürüyeyim, Kararlı kıl beni, yalnız senin adından korkayım.
12 ೧೨ ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.
Ya Rab Tanrım, bütün yüreğimle sana şükredeceğim, Adını sonsuza dek yücelteceğim.
13 ೧೩ ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. (Sheol )
Çünkü bana sevgin büyüktür, Canımı ölüler diyarının derinliklerinden sen kurtardın. (Sheol )
14 ೧೪ ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.
Ey Tanrı, küstahlar bana saldırıyor, Zorbalar sürüsü, sana aldırmayanlar Canımı almak istiyor,
15 ೧೫ ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
Oysa sen, ya Rab, Sevecen, lütfeden, tez öfkelenmeyen, Sevgisi ve sadakati bol bir Tanrı'sın.
16 ೧೬ ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.
Yönel bana, acı halime, Kuluna kendi gücünü ver, Kurtar hizmetçinin oğlunu.
17 ೧೭ ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.
İyiliğinin bir belirtisini göster bana; Benden nefret edenler görüp utansın; Çünkü sen, ya RAB, bana yardım ettin, Beni avuttun.