< ಕೀರ್ತನೆಗಳು 87 >
1 ೧ ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.
Filiis Core, Psalmus Cantici. Fundamenta eius in montibus sanctis:
2 ೨ ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
diligit Dominus portas Sion super omnia tabernacula Iacob.
3 ೩ ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
Gloriosa dicta sunt de te, civitas Dei.
4 ೪ “ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
Memor ero Rahab, et Babylonis scientium me. Ecce alienigenæ, et Tyrus, et populus Æthiopum, hi fuerunt illic.
5 ೫ ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
Numquid Sion dicet: Homo, et homo natus est in ea: et ipse fundavit eam Altissimus?
6 ೬ ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. (ಸೆಲಾ)
Dominus narrabit in scripturis populorum, et principum: horum, qui fuerunt in ea.
7 ೭ ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.
Sicut lætantium omnium habitatio est in te.