< ಕೀರ್ತನೆಗಳು 88 >

1 ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ. ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.
Пісня. Псалом. Синів Кореєвих. Для дириґента хору. На „Махалат леаннот“. Пісня навча́льна Ге́мана езрахе́янина. Господи, Боже спасі́ння мого́, вдень я кли́чу й вночі Я перед Тобою:
2 ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ; ಕಿವಿಗೊಟ್ಟು ನನ್ನ ಕೂಗನ್ನು ಕೇಳು.
хай молитва моя дійде перед обличчя Твоє, нахили Своє ухо до зо́йку мого,
3 ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು. (Sheol h7585)
душа бо моя насити́лась нещастями, а життя моє збли́зилося до шео́лу! (Sheol h7585)
4 ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ.
Я до тих прирахований став, що в могилу відхо́дять, я став, немов муж той безсилий.
5 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ. ಹತರಾದವರು ನಿನ್ನ ಪರಿಪಾಲನೆ ಇಲ್ಲದವರು; ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ.
Я кинений серед померлих, немов оті тру́пи, що в гро́бі лежать, що про них Ти не згадуєш більш, і потя́ті вони від Твоєї руки.
6 ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.
Умісти́в Ти мене в глибоче́зну могилу, до пітьми́ в глибина́х.
7 ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದಿ. (ಸೆಲಾ)
На мене лягла́ Твоя лють, і Ти всіма́ Своїми лама́ннями мучив мене. (Се́ла)
8 ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.
Віддалив Ти від мене знайо́мих моїх, учинив Ти мене за оги́ду для них, Я за́мкнений і не вихо́джу,
9 ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.
стемні́ло з біди моє око. Я кожного дня Тебе кличу, о Господи, простяга́ю до Тебе ру́ки свої!
10 ೧೦ ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? (ಸೆಲಾ)
Чи Ти чудо вчиниш померлим? Чи тру́пи встануть і будуть хвали́ти Тебе? (Се́ла)
11 ೧೧ ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?
Хіба милість Твоя буде в гро́бі звіща́тись, а вірність Твоя в аввадо́ні?
12 ೧೨ ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?
Чи позна́ється в те́мряві чудо Твоє, а в краю́ забуття́ — справедливість Твоя?
13 ೧೩ ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.
Та я кличу до Тебе, о Господи, і вранці молитва моя Тебе випере́джує.
14 ೧೪ ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?
Для чо́го, о Господи, кидаєш душу мою, ховаєш від мене обличчя Своє?
15 ೧೫ ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.
Нужде́нний я та помираю відма́лку, перено́шу страхіття Твої, я осла́блений став.
16 ೧೬ ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.
Перейшли́ надо мною Твої пересе́рдя, страхіття Твої зруйнува́ли мене, —
17 ೧೭ ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ; ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ.
вони оточа́ють мене, як вода, увесь день, вони ра́зом мене обляга́ють.
18 ೧೮ ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.
друга й при́ятеля віддалив Ти від мене, знайо́мі мої — як та те́мрява!

< ಕೀರ್ತನೆಗಳು 88 >