< ಕೀರ್ತನೆಗಳು 89 >
1 ೧ ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.
Maskil na Etan dangin Ezra. Zan rera game da ƙauna mai girma ta Ubangiji har abada; da bakina zan sanar da amincinka a dukan zamanai.
2 ೨ ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
Zan furta cewa ƙaunarka tana nan daram har abada, cewa ka kafa amincinka a sama kanta.
3 ೩ ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,
Ka ce, “Na yi alkawari da zaɓaɓɓena, na rantse wa Dawuda bawana,
4 ೪ ‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. (ಸೆಲಾ)
cewa ‘Zan kafa zuriyarka har abada in kuma sa kursiyinka yă tsaya daram dukan zamanai.’” (Sela)
5 ೫ ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.
Sammai na yabon abubuwan banmamakinka, ya Ubangiji, amincinka shi ma, a cikin taron tsarkakanka.
6 ೬ ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?
Gama wane ne a sarari za a iya kwatanta da Ubangiji? Wane ne yake kamar Ubangiji a cikin talikan samaniya?
7 ೭ ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
Cikin taron tsarkaka Allah ne aka fi tsoro; shi ne mafi bantsoro fiye da dukan waɗanda suka kewaye shi.
8 ೮ ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
Ya Ubangiji Allah Maɗaukaki, wane ne kamar ka? Kai mai iko ne, ya Ubangiji, kuma amincinka ya kewaye ka.
9 ೯ ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
Kana mulkin teku mai tumbatsa; sa’ad da raƙuma sun tashi, kakan kwantar da su.
10 ೧೦ ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.
Ka ragargaza Rahab kamar waɗanda aka kashe; da hannunka mai ƙarfi ka watsar da abokan gābanka.
11 ೧೧ ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
Sammai naka ne, haka kuma duniya; ka kafa duniya da dukan abin da yake cikinta.
12 ೧೨ ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
Ka halicce arewa da kudu; Tabor da Hermon suna rera don farin ciki ga sunanka.
13 ೧೩ ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
Hannunka mai iko ne; hannunka yana da ƙarfi, hannunka na dama ya sami ɗaukaka.
14 ೧೪ ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
Adalci da gaskiya su ne tushen kursiyinka; ƙauna da aminci suna tafiya a gabanka.
15 ೧೫ ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
Masu albarka ne waɗanda suka koyi yin maka kirari waɗanda suke tafiya cikin hasken da yake gabanka, Ubangiji.
16 ೧೬ ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
Suna farin ciki a cikin sunanka dukan yini; suna samun ɗaukaka cikin adalcinka.
17 ೧೭ ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.
Gama kai ne ɗaukakarsu da ƙarfinsu, kuma ta wurin alherinka ka ɗaukaka ƙahonka.
18 ೧೮ ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.
Tabbatacce, garkuwarmu ta Ubangiji ce, ta sarkinmu ce, da kuma ta Mai Tsarki na Isra’ila ce.
19 ೧೯ ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
Ka taɓa yin magana cikin wahayi, ga mutanenka masu aminci ka ce, “Na ba wa jarumi ƙarfi; na ɗaukaka saurayi daga cikin mutane.
20 ೨೦ ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
Na sami Dawuda bawana; da mai na mai tsarki na shafe shi.
21 ೨೧ ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.
Hannuna zai kasance tare da shi; tabbatacce hannuna zai ƙarfafa shi.
22 ೨೨ ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.
Babu abokin gāban da zai sa yă biya haraji; babu mugun mutumin da zai danne shi.
23 ೨೩ ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.
Zan murƙushe maƙiyansa a gabansa in kashe dukan abokan gābansa.
24 ೨೪ ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.
Amintacciya ƙaunata za tă kasance tare da shi, kuma ta wurin sunana za a ɗaukaka ƙahonsa.
25 ೨೫ ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.
Zan sa hannunsa a bisa teku, hannunsa na dama a bisa koguna.
26 ೨೬ ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.
Zai yi kira gare ni yă ce, ‘Kai ne Mahaifina, Allahna, Dutse mai cetona.’
27 ೨೭ ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
Zan kuma naɗa shi ɗan farina, mafi ɗaukaka cikin sarakunan duniya.
28 ೨೮ ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
Zan ci gaba da ƙaunarsa har abada, alkawarina da shi ba zai taɓa fasa ba.
29 ೨೯ ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.
Zan kafa zuriyarsa har abada, kursiyinsa muddin sammai suna nan.
30 ೩೦ ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,
“In’ya’yansa maza suka yashe dokata ba su kuwa bi ƙa’idodina ba,
31 ೩೧ ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,
in suka take ƙa’idodina suka kuma kāsa kiyaye umarnaina,
32 ೩೨ ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.
zan hukunta zunubinsu da sanda, laifinsu da bulala;
33 ೩೩ ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.
amma ba zan ɗauke ƙaunata daga gare shi ba, ba kuwa zan taɓa rasa cika amincina ba.
34 ೩೪ ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.
Ba zan take alkawarina ba ko in canja abin da leɓunana suka ambata.
35 ೩೫ ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
Sau ɗaya ba ƙari, na rantse da tsarkina, ba kuwa zan yi ƙarya wa Dawuda ba,
36 ೩೬ ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
cewa zuriyarsa za tă ci gaba har abada kuma kursiyinsa zai dawwama a gabana kamar rana;
37 ೩೭ ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” (ಸೆಲಾ)
zai kahu har abada kamar wata, amintacciyar shaida a cikin sarari.” (Sela)
38 ೩೮ ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.
Amma ka ƙi, ka yi ƙyama ka kuma yi fushi sosai da shafaffenka.
39 ೩೯ ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
Ka soke alkawarin da ka yi da bawanka ka kuma ƙazantar da rawaninsa a ƙura.
40 ೪೦ ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
Ka rurrushe dukan katangansa ka sa kagaransa suka zama kufai.
41 ೪೧ ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
Dukan waɗanda suka wuce sun washe shi; ya zama abin dariya wajen maƙwabtansa.
42 ೪೨ ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
Ka ɗaukaka hannun dama na maƙiyansa; ka sa dukan abokan gābansa suna farin ciki.
43 ೪೩ ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
Ka juye bakin takobinsa ba ka kuma taimake shi a cikin yaƙi ba.
44 ೪೪ ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
Ka kawo ƙarshen darajarsa ka kuma jefar da kursiyinsa ƙasa.
45 ೪೫ ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. (ಸೆಲಾ)
Ka rage kwanakin ƙuruciyarsa; ka rufe shi da mayafin kunya. (Sela)
46 ೪೬ ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?
Har yaushe, ya Ubangiji za ka ɓoye? Za ka ɓoye har abada ne? Har yaushe fushinka zai yi ta ci kamar wuta?
47 ೪೭ ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
Ka tuna yadda raina mai wucewa ne. Gama ka halicce dukan mutane ba amfani!
48 ೪೮ ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? (ಸೆಲಾ) (Sheol )
Wanda mutum ne zai rayu da ba zai ga mutuwa ba, ko yă cece kansa daga ikon kabari? (Sela) (Sheol )
49 ೪೯ ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?
Ya Ubangiji, ina ƙaunar mai girma ta dā, wadda cikin amincinka ka rantse wa Dawuda?
50 ೫೦ ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
Ka tuna, Ubangiji, yadda aka yi wa bawanka ba’a, yadda na jimre a zuciyata da zage-zagen dukan al’ummai,
51 ೫೧ ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.
zage-zagen da abokan gābanka suka yi mini, ya Ubangiji, da suka yi wa kowane matakin da shafaffenka ya ɗauka.
52 ೫೨ ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.
Yabo ya tabbata ga Ubangiji har abada!