< ಕೀರ್ತನೆಗಳು 90 >
1 ೧ ಪಾಪಾತ್ಮರಿಗೆ ದೇವರ ದಯವೇ ಆಶ್ರಯ ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
या रब्ब, नसल दर नसल, तू ही हमारी पनाहगाह रहा है।
2 ೨ ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
इससे पहले के पहाड़ पैदा हुए, या ज़मीन और दुनिया को तूने बनाया, इब्तिदा से हमेशा तक तू ही ख़ुदा है।
3 ೩ “ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
तू इंसान को फिर ख़ाक में मिला देता है, और फ़रमाता है, “ऐ बनी आदम, लौट आओ!”
4 ೪ ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.
क्यूँकि तेरी नज़र में हज़ार बरस ऐसे हैं, जैसे कल का दिन जो गुज़र गया, और जैसे रात का एक पहर।
5 ೫ ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
तू उनको जैसे सैलाब से बहा ले जाता है; वह नींद की एक झपकी की तरह हैं, वह सुबह को उगने वाली घास की तरह हैं।
6 ೬ ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
वह सुबह को लहलहाती और बढ़ती है, वह शाम को कटती और सूख जातीहै।
7 ೭ ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
क्यूँकि हम तेरे क़हर से फ़ना हो गए; और तेरे ग़ज़ब से परेशान हुए।
8 ೮ ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
तूने हमारी बदकिरदारी को अपने सामने रख्खा, और हमारे छुपे हुए गुनाहों को अपने चेहरे की रोशनी में।
9 ೯ ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
क्यूँकि हमारे तमाम दिन तेरे क़हर में गुज़रे, हमारी उम्र ख़याल की तरह जाती रहती है।
10 ೧೦ ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
हमारी उम्र की मी'आद सत्तर बरस है, या कु़व्वत हो तो अस्सी बरस; तो भी उनकी रौनक़ महज़ मशक्क़त और ग़म है, क्यूँकि वह जल्द जाती रहती है और हम उड़ जाते हैं।
11 ೧೧ ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
तेरे क़हर की शिद्दत को कौन जानता है, और तेरे ख़ौफ़ के मुताबिक़ तेरे ग़ज़ब को?
12 ೧೨ ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
हम को अपने दिन गिनना सिखा, ऐसा कि हम अक़्ल दिल हासिल करें।
13 ೧೩ ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
ऐ ख़ुदावन्द, बाज़ आ! कब तक? और अपने बन्दों पर रहम फ़रमा!
14 ೧೪ ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
सुबह को अपनी शफ़क़त से हम को आसूदा कर, ताकि हम उम्र भर ख़ुश — ओ — ख़ुर्रम रहें।
15 ೧೫ ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
जितने दिन तूने हम को दुख दिया, और जितने बरस हम मुसीबत में रहे, उतनी ही ख़ुशी हम को 'इनायत कर।
16 ೧೬ ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.
तेरा काम तेरे बन्दों पर, और तेरा जलाल उनकी औलाद पर ज़ाहिर हो।
17 ೧೭ ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.
और रब्ब हमारे ख़ुदा का करम हम पर साया करे। हमारे हाथों के काम को हमारे लिए क़याम बख़्श हाँ हमारे हाथों के काम को क़याम बख़्श दे।