< ಕೀರ್ತನೆಗಳು 91 >
1 ೧ ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
지존자의 은밀한 곳에 거하는 자는 전능하신 자의 그늘 아래 거하리로다
2 ೨ ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.
내가 여호와를 가리켜 말하기를 저는 나의 피난처요, 나의 요새요, 나의 의뢰하는 하나님이라 하리니
3 ೩ ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
이는 저가 너를 새 사냥군의 올무에서와 극한 염병에서 건지실 것임이로다
4 ೪ ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
저가 너를 그 깃으로 덮으시리니 네가 그 날개 아래 피하리로다 그의 진실함은 방패와 손 방패가 되나니
5 ೫ ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,
너는 밤에 놀램과 낮에 흐르는 살과
6 ೬ ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.
흑암 중에 행하는 염병과 백주에 황폐케 하는 파멸을 두려워 아니하리로다
7 ೭ ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
천인이 네 곁에서, 만인이 네 우편에서 엎드러지나 이 재앙이 네게 가까이 못하리로다
8 ೮ ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
오직 너는 목도하리니 악인의 보응이 네게 보이리로다
9 ೯ ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
네가 말하기를 여호와는 나의 피난처시라 하고 지존자로 거처를 삼았으므로
10 ೧೦ ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.
화가 네게 미치지 못하며 재앙이 네 장막에 가까이 오지 못하리니
11 ೧೧ ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
저가 너를 위하여 그 사자들을 명하사 네 모든 길에 너를 지키게 하심이라
12 ೧೨ ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
저희가 그 손으로 너를 붙들어 발이 돌에 부딪히지 않게 하리로다
13 ೧೩ ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.
네가 사자와 독사를 밟으며 젊은 사자와 뱀을 발로 누르리로다
14 ೧೪ ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.
하나님이 가라사대 저가 나를 사랑한즉 내가 저를 건지리라 저가 내 이름을 안즉 내가 저를 높이리라
15 ೧೫ ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
저가 내게 간구하리니 내가 응답하리라 저희 환난 때에 내가 저와 함께하여 저를 건지고 영화롭게 하리라
16 ೧೬ ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.
내가 장수함으로 저를 만족케 하며 나의 구원으로 보이리라 하시도다