< ಕೀರ್ತನೆಗಳು 92 >
1 ೧ ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
“A psalm for the Sabbath-day.” It is a good thing to give thanks to the LORD, And to sing praises to thy name, O Most High!
2 ೨ ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
To show forth thy loving-kindness in the morning, And thy faithfulness every night,
3 ೩ ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
Upon the ten-stringed instrument and the lute, Upon the harp with a solemn sound.
4 ೪ ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
For thou, LORD, hast made me glad by thy doings; In the works of thy hands I greatly rejoice!
5 ೫ ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
How great are thy works, O LORD! How deep thy purposes!
6 ೬ ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
But the unwise man knoweth not this, And the fool understandeth it not.
7 ೭ ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
When the wicked spring up like grass, And all who practise iniquity flourish, It is but to be destroyed for ever!
8 ೮ ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
Thou, O LORD! art for ever exalted!
9 ೯ ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
For, lo! thine enemies, O LORD! For, lo! thine enemies perish, And dispersed are all who do iniquity!
10 ೧೦ ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
But my horn thou exaltest like the buffalo's; I am anointed with fresh oil.
11 ೧೧ ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
Mine eye hath gazed with joy upon mine enemies; Mine ears have heard with joy of my wicked adversaries.
12 ೧೨ ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
The righteous shall flourish like the palm-tree; They shall grow up like the cedars of Lebanon;
13 ೧೩ ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
Planted in the house of the LORD, They shall flourish in the courts of our God.
14 ೧೪ ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.
Even in old age they bring forth fruit; They are green, and full of sap;
15 ೧೫ ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.
To show that the LORD, my rock, is upright, That there is no unrighteousness in him.