< ಕೀರ್ತನೆಗಳು 93 >
1 ೧ ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
ख़ुदावन्द सलतनत करता है वह शौकत से मुलब्बस है ख़ुदावन्द कु़दरत से मुलब्बस है, वह उससे कमर बस्ता है इस लिए जहान क़ाईम है और उसे जुम्बिश नहीं।
2 ೨ ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.
तेरा तख़्त पहले से क़ाईम है, तू इब्तिदा से है।
3 ೩ ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.
सैलाबों ने, ऐ ख़ुदावन्द! सैलाबों ने शोर मचा रख्खा है, सैलाब मौजज़न हैं।
4 ೪ ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
बहरों की आवाज़ से, समन्दर की ज़बरदस्त मौजों से भी, ख़ुदावन्द बलन्द — ओ — क़ादिर है।
5 ೫ ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
तेरी शहादतें बिल्कुल सच्ची हैं; ऐ ख़ुदावन्द हमेशा से हमेशा तक के लिए पाकीज़गी तेरे घर को ज़ेबा है।