< ಕೀರ್ತನೆಗಳು 94 >
1 ೧ ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.
Yahwe, Ee Mungu ulipaye kisasi, Mungu ulipaye kisasi, utuangazie sisi.
2 ೨ ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.
Inuka, muhukumu wa nchi, uwape wenye majivuno kile wanachosahili.
3 ೩ ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?
Mpaka lini waovu, Yahwe, mpaka lini waovu watafurahia?
4 ೪ ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.
Wanamwaga maneno yao ya kiburi; wote watendao uovu wanajivuna.
5 ೫ ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
Wanawaangamiza watu wako, Yahwe; wanalitesa taifa ambao ni milki yako.
6 ೬ ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
Wanamuua mjane na mgeni aishiye nchini mwao, na wanamuua yatima.
7 ೭ ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
Nao husema, “Yahwe hawezi kuona, Mungu wa Yakobo hayagundui haya.”
8 ೮ ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
Tambueni, ninyi watu wajinga! Enyi wapumbavu, mtajifunza lini?
9 ೯ ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
Yeye aliye liumba sikio, hasikii? Yeye aliye litengeneza jicho, haoni?
10 ೧೦ ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
Yeye awaadhibuye mataifa, hayuko sahihi? Yeye ndiye ampaye maarifa mwanadamu.
11 ೧೧ ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
Yahwe anayajua mawazo ya wanadamu, kuwa ni mvuke.
12 ೧೨ ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
Amebarikiwa yule ambaye umuongozaye, Yahwe, yule ambaye wewe humfundisha kutoka katika sheria yako.
13 ೧೩ ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
Wewe humpa pumziko wakati wa shida mpaka shimo litakapokuwa limechimbwa kwa ajili ya waovu.
14 ೧೪ ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
Maana Yahwe hatawaacha watu wake wala kutelekeza warithi wake.
15 ೧೫ ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
Kwa kuwa tena hukumu itakuwa ya haki; na wote walio wanyoofu wa moyo wataifuata.
16 ೧೬ ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
Ni nani atainuka kunitetea dhidi ya watendao uovu? Ni nani atasimama dhidi ya waovu kwa ajili yangu?
17 ೧೭ ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
Kama Yahwe asingelikuwa msaada wangu, haraka ningekuwa nimelala mahali pa ukimya.
18 ೧೮ ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
Niliposema, mguu wangu unateleza,” Uaminifu wa agano lako, Yahwe, uliniinua.
19 ೧೯ ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
Wasiwasi uwapo mwingi ndani yangu, faraja yako hunifurahisha.
20 ೨೦ ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?
Kiti cha uharibifu chaweza kushirikiana nawe, kitungacho madhara kwa njia ya sheria?
21 ೨೧ ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
Wao kwa pamoja hupanga njama kuwaua wenye haki na kuwahukumu adhabu ya kifo wenye haki.
22 ೨೨ ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.
Lakini Yahwe amekuwa mnara wangu mrefu, na Mungu wangu amekuwa mwamba wa kimbilio langu.
23 ೨೩ ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.
Yeye atawarudishia uovu wao wenyewe na atawaangamiza katika uovu wao wenyewe. Yahwe Mungu wetu atawaangamiza.