< ಕೀರ್ತನೆಗಳು 95 >

1 ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
بیایید خداوند را بسراییم و صخره نجات خود را آواز شادمانی دهیم!۱
2 ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
به حضور او با حمد نزدیک بشویم! و با مزامیر او راآواز شادمانی دهیم!۲
3 ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
زیرا که یهوه، خدای بزرگ است،۳
4 ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.
و پادشاه عظیم بر جمیع خدایان. نشیبهای زمین در دست وی است و فرازهای کوهها از آن او.۴
5 ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
دریا از آن اوست، او آن رابساخت؛ و دستهای وی خشکی را مصور نمود.۵
6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.
بیایید عبادت و سجده نماییم و به حضورآفریننده خود خداوند زانو زنیم!۶
7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
زیرا که اوخدای ما است! و ما قوم مرتع و گله دست اومی باشیم! امروز کاش آواز او را می‌شنیدید!۷
8 ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
دل خود را سخت مسازید، مثل مریبا، مانند یوم مسا در صحرا.۸
9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
چون اجداد شما مرا آزمودند وتجربه کردند و اعمال مرا دیدند.۹
10 ೧೦ ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.
چهل سال ازآن قوم محزون بودم و گفتم: «قوم گمراه دل هستند که طرق مرا نشناختند.۱۰
11 ೧೧ ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.
پس در غضب خود قسم خوردم، که به آرامی من داخل نخواهند شد.»۱۱

< ಕೀರ್ತನೆಗಳು 95 >