< ಕೀರ್ತನೆಗಳು 95 >
1 ೧ ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
Dejte, prepevajmo Gospodu, ukajmo skali blaginje naše!
2 ೨ ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
Pojdimo pred obličje njegovo sè zahvaljevanjem, s psalmi mu ukajmo.
3 ೩ ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
Ker Bog mogočni velik je Gospod, in velik kralj nad vse bogove.
4 ೪ ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.
V roki njegovi so najglobočji sledovi zemlje, v njegovi oblasti so gorâ moči.
5 ೫ ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
Njegovo je sámo morje, ker on ga je naredil, in súha zemlja, katero so ustvarile roke njegove.
6 ೬ ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.
Pridite, priklonimo se in padimo na tla; pripognimo kolena pred Gospodom, kateri nas je naredil.
7 ೭ ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
Ker on je Bog naš, mi pa ljudstvo paše njegove, in čeda vodbe njegove; danes če slišite glas njegov,
8 ೮ ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
"Ne okamenite srca svojega, kakor v prepiru, kakor o dnevi izkušnjave v puščavi.
9 ೯ ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
Ko so me izkušali očetje vaši: izkusili so me in spoznali delo moje.
10 ೧೦ ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.
Štirideset let sem imel preglavico s tistim rodom govoreč: Ljudstvo so srca tavajočega, in potov mojih ne poznajo.
11 ೧೧ ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.
Njim sem prisegel v jezi svoji, da ne vnidejo v pókoj moj."