< ಕೀರ್ತನೆಗಳು 96 >
1 ೧ ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
Kantu al la Eternulo novan kanton; Kantu al la Eternulo la tuta tero.
2 ೨ ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
Kantu al la Eternulo, gloru Lian nomon, Proklamu de tago al tago Lian savon.
3 ೩ ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
Rakontu inter la popoloj Lian gloron, Inter ĉiuj gentoj Liajn miraklojn.
4 ೪ ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
Ĉar la Eternulo estas granda kaj tre glorinda, Li estas timinda pli ol ĉiuj dioj.
5 ೫ ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
Ĉar ĉiuj dioj de la popoloj estas nur idoloj; Sed la Eternulo kreis la ĉielon.
6 ೬ ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
Gloro kaj majesto estas antaŭ Li, Forto kaj beleco estas en Lia sanktejo.
7 ೭ ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
Tributu al la Eternulo, familioj de la popoloj; Tributu al la Eternulo gloron kaj potencon.
8 ೮ ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
Tributu al la Eternulo la honoron de Lia nomo; Alportu donacon kaj venu en Liajn kortojn.
9 ೯ ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
Kliniĝu al la Eternulo en sankta ornamo; Tremu antaŭ Li la tuta tero.
10 ೧೦ ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
Diru inter la popoloj: La Eternulo reĝas, Kaj fortikigita estas la mondo, ke ĝi ne ŝanceliĝu; Li juĝas la popolojn en justeco.
11 ೧೧ ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
Ĝoju la ĉielo, kaj estu gaja la tero, Bruu la maro, kaj ĉio, kio ĝin plenigas.
12 ೧೨ ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.
Ĝoju la kampo, kaj ĉio, kio estas sur ĝi; Tiam kantu ĉiuj arboj de la arbaro
13 ೧೩ ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
Antaŭ la Eternulo, ĉar Li venas, Ĉar Li venas, por juĝi la teron; Li juĝos la mondon kun justeco Kaj la popolojn kun Sia fideleco.