< ಕೀರ್ತನೆಗಳು 96 >

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
שירו ליהוה שיר חדש שירו ליהוה כל-הארץ
2 ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
שירו ליהוה ברכו שמו בשרו מיום-ליום ישועתו
3 ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
ספרו בגוים כבודו בכל-העמים נפלאותיו
4 ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
כי גדול יהוה ומהלל מאד נורא הוא על-כל-אלהים
5 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
כי כל-אלהי העמים אלילים ויהוה שמים עשה
6 ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
הוד-והדר לפניו עז ותפארת במקדשו
7 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
הבו ליהוה משפחות עמים הבו ליהוה כבוד ועז
8 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
הבו ליהוה כבוד שמו שאו-מנחה ובאו לחצרותיו
9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
השתחוו ליהוה בהדרת-קדש חילו מפניו כל-הארץ
10 ೧೦ ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
אמרו בגוים יהוה מלך-- אף-תכון תבל בל-תמוט ידין עמים במישרים
11 ೧೧ ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
ישמחו השמים ותגל הארץ ירעם הים ומלאו
12 ೧೨ ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.
יעלז שדי וכל-אשר-בו אז ירננו כל-עצי-יער
13 ೧೩ ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
לפני יהוה כי בא-- כי בא לשפט הארץ ישפט-תבל בצדק ועמים באמונתו

< ಕೀರ್ತನೆಗಳು 96 >