< ಕೀರ್ತನೆಗಳು 97 >
1 ೧ ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
耶和華作王!願地快樂! 願眾海島歡喜!
2 ೨ ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.
密雲和幽暗在他的四圍; 公義和公平是他寶座的根基。
3 ೩ ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
有烈火在他前頭行, 燒滅他四圍的敵人。
4 ೪ ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.
他的閃電光照世界, 大地看見便震動。
5 ೫ ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.
諸山見耶和華的面, 就是全地之主的面,便消化如蠟。
6 ೬ ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
諸天表明他的公義; 萬民看見他的榮耀。
7 ೭ ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
願一切事奉雕刻的偶像、 靠虛無之神自誇的,都蒙羞愧。 萬神哪,你們都當拜他。
8 ೮ ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
耶和華啊,錫安聽見你的判斷就歡喜; 猶大的城邑也都快樂。
9 ೯ ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
因為你-耶和華至高,超乎全地; 你被尊崇,遠超萬神之上。
10 ೧೦ ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
你們愛耶和華的,都當恨惡罪惡; 他保護聖民的性命, 搭救他們脫離惡人的手。
11 ೧೧ ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
散布亮光是為義人; 預備喜樂是為正直人。
12 ೧೨ ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
你們義人當靠耶和華歡喜, 稱謝他可記念的聖名。